ಬೆಂಗಳೂರು: ಮುಡಾ ಹಗರಣದ ವಿರುದ್ಧ ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ-ಜೆಡಿಎಸ್ ಮೈಸೂರು ಚಲೋ ಪಾದಯಾತ್ರೆ ಆರಂಭಿಸಿದ್ದು, ಪಾದಯಾತ್ರೆಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.
ಭ್ರಷ್ಟಾಚಾರದಲ್ಲಿ ಸಿಲುಕಿ ಇನ್ನೇನು ರಾಜೀನಾಮೆ ನೀಡುವ ಹಂತದಲ್ಲಿರುವ ಸಿಎಂ ಸಿದ್ದರಾಮಯ್ಯ, ಗೌರವಯುತವಾಗಿ ತಮ್ಮ ಸ್ಥಾನಕ್ಕೆ ರಾಜಿನಾಮೆ ಕೊಡಬೇಕು ಎಂದು ಮೈಸೂರು ಚಲೋ ಸಮಾವೇಶದಲ್ಲಿ ಒತ್ತಾಯಿಸಿದರು.
ಬಿಜೆಪಿ-ಜೆಡಿಎಸ್ ಪಾದಯಾತ್ರೆ ಮಧ್ಯದಲ್ಲೇ ಸಿಎಂ ರಾಜೀನಾಮೆ ಕೊಟ್ಟು ಮನೆಗೆ ಹೋಗುತ್ತಾರೆ. ಭ್ರಷ್ಟಾಚಾರದಲ್ಲಿ ತೊಡಗಿ, ಜನಹಿತವನ್ನು ಸಂಪೂರ್ಣವಾಗಿ ಸಿದ್ದರಾಮಯ್ಯ ಮರೆತಿದ್ದಾರೆ. ಸರ್ಕಾರ ಲೂಟಿ, ಹಗಲು ದರೋಡೆಯಲ್ಲಿ ನಿರತವಾಗಿದೆ. ಮುಡಾ ಹಗರಣ, ವಾಲ್ಮೀಕಿ ನಿಗಮಗಳಲ್ಲಿ ಭ್ರಷ್ಟಚಹಾರ ನಡೆದಿದೆ. ಸಿದ್ದರಾಮಯ್ಯ ವಿರುದ್ಧ ಆರೋಪಗಳು ಕೇಳಿಬಂದಿವೆ. ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು. ಪಾದಯಾತ್ರೆ ಮುಗಿಯುವಷ್ಟರಲ್ಲಿ ಸಿದ್ದರಾಮಯ್ಯ ರಾಜೀನಾಮೆ ನಿಶ್ಚಿತ ಎಂದು ಎಂದು ಹೇಳಿದ್ದಾರೆ.