ಮೈಸೂರು: ಮುಡಾ ಹಗರಣ ಖಂಡಿಸಿ ಸಿಎಂ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರದ ವಿರುದ್ಧ ಇಂದಿನಿಂದ ಬಿಜೆಪಿ-ಜೆಡಿಎಸ್ ಜಂಟಿ ಸಮರ ಆರಂಭವಾಗಲಿದೆ. ಬೆಂಗಳೂರಿನಿಂದ ಮೈಸೂರಿನವರೆಗೆ ಪಾದಯಾತ್ರೆ ನಡೆಯಲಿದೆ. ಪಾದಯಾತ್ರೆ ಆರಂಭಕ್ಕೂ ಮುನ್ನ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ನಾಡ ಅದಿದೇವತೆ ಮೊರೆ ಹೋಗಿದ್ದಾರೆ.
ಪಾದಯಾತ್ರೆಗೂ ಮುನ್ನ ಬಿ.ವೈ.ವಿಜಯೇಂದ್ರ ಚಾಮುಂಡಿ ಬೆಟ್ಟಕ್ಕೆ ತೆರಳಿ ತಾಯಿ ಚಾಮುಂಡೇಶ್ವರಿ ದೇವಿಗೆ ವಿಶೇಷ ಪೂಜೆ ಸಲ್ಲಿಸಿದರು. ಪಾದಯಾತ್ರೆ ಯಶಸ್ವಿಯಾಗಲೆಂದು ಪ್ರಾರ್ಥಿಸಿದರು. ವಿಜಯೇಂದ್ರ ಅವರಿಗೆ ಬಿಜೆಪಿ ನಾಯಕರು ಸಾಥ್ ನೀಡಿದರು.
ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ವಿಜಯೇಂದ್ರ, ಕಾಂಗ್ರೆಸ್ ಹಗರಣಗಳ ವಿರುದ್ಧದ ಹೋರಾಟ ಯಶಸ್ವಿಯಾಗಬೇಕು. ನಮ್ಮ ಕಾರ್ಯಕರ್ತರು ಪಾದಯಾತ್ರೆಗೆ ಎಲ್ಲಾ ವ್ಯವಸ್ಥೆ ಮಾಡಿದ್ದಾರೆ. ನಿರೀಕ್ಷೆಗೂ ಮೀರಿ ಜನರು ಬರಲಿದ್ದಾರೆ. ಮೈಸೂರು ಭಗದ ಜನರ ಸಂಪೂರ್ಣ ಬೆಂಬಲ ಪಾದಯಾತ್ರೆಗೆ ಬೇಕು ಎಂದು ಕರೆ ನೀಡಿದ್ದಾರೆ.