ಬೆಂಗಳೂರು: ಮುಡಾ ಹಗರಣ ಖಂಡಿಸಿ ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ-ಜೆಡಿಎಸ್ ನಡೆಸಲು ಮುಂದಾಗಿರುವ ಪಾದಯಾತ್ರೆಗೆ ಅನುಮತಿ ಇಲ್ಲ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ ತಿಳಿಸಿದ್ದಾರೆ.
ಬೆಂಗಳೂರಿನಿಂದ ಮೈಸೂರಿನವರೆಗೆ ನಾಳೆಯಿಂದ ಬಿಜೆಪಿ-ಜೆಡಿಎಸ್ ಪಾದಯಾತ್ರೆ ಆರಂಭವಾಗಲಿದೆ. ಪಾದಯಾತ್ರೆಗೆ ಬೆಂಗಳೂರು ನಗರದಲ್ಲಿ ಅವಕಾಶವಿಲ್ಲ. ನಗರದಲ್ಲಿ ಪ್ರತಿಭಟನೆಗಳಿಗೂ ಅವಕಾಶವಿಲ್ಲ ಎಂದು ತಿಳಿಸಿದ್ದಾರೆ.
ಮೈಸೂರು ಚಲೋ ಪಾದಯಾತ್ರೆ ಬಗ್ಗೆ ನಮಗೆ ಮಾಹಿತಿ ಇಲ್ಲ, ಈವರೆಗೂ ಯಾರೂ ಈ ಬಗ್ಗೆ ವಿನಂತಿ ಮಾಡಿಲ್ಲ. ಯಾವರೀತಿ ಪಾದಾಯಾತ್ರೆ, ಎಲ್ಲಿಂದ ಮಾಡುತ್ತಾರೆ ಎಂಬ ಬಗ್ಗೆಯೂ ಗೊತ್ತಿಲ್ಲ. ಬೆಂಗಳೂರು ನಗರದಲ್ಲಿ ಪಾದಯಾತ್ರೆ, ಪ್ರತಿಭಟನೆಗಳಿಗೆ ಅವಕಾಶವಿಲ್ಲ. ಹೈಕೋರ್ಟ್ ಆದೇಶದ ಅನ್ವಯ ಯಾವುದೇ ಅನುಮತಿ ಇಲ್ಲ ಎಂದು ಸ್ಪಷ್ಟಪಡಿಸಿದರು.