ಬೆಂಗಳೂರು: ಮುಡಾ ಹಗರಣದ ವಿರುದ್ಧ ಬಿಜೆಪಿ-ಜೆಡಿಎಸ್ ಜಂಟಿ ಪಾದಯಾತ್ರೆ ಘೋಷಿಸಿದ್ದು, ಪಾದಯಾತ್ರೆಗೆ ಅನುಮತಿ ಇಲ್ಲ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಈವರೆಗೆ ಹಲವುಬಾರಿ ಹೇಳಿಕೆ ನೀಡಿದ್ದರು. ಆದರೆ ಈಗ ಪಾದಯಾತ್ರೆಗೆ ಅನುಮತಿ ನೀಡಲು ನಿರ್ಧರಿಸಲಾಗಿದೆ ಎಂದು ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಗೃಹ ಸಚಿವ ಡಾ.ಜಿ.ಪರಮೇಶ್ವರ್, ಶಾಂತಿಯುತವಾಗಿ ಪಾದಯಾತ್ರೆ ಮಾಡುವುದಾಗಿ ಹೇಳಿದ್ದಾರೆ. ಹೀಗಾಗಿ ಬಿಜೆಪಿ-ಜೆಡಿಎಸ್ ಪಾದಯಾತ್ರೆಗೆ ಅನುಮತಿ ನೀಡಲು ನಿರ್ಧರಿಸಲಾಗಿದೆ ಎಂದು ಹೇಳಿದರು.
ಈ ನಡುವೆ ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ, ಪಾದಯಾತ್ರೆ, ಪ್ರತಿಭಟನೆಗಳಿಗೆ ಅವಕಾಶವಿಲ್ಲ. ಈವರೆಗೂ ಯಾವ ಪಾದಯಾತ್ರೆ ಬಗ್ಗೆ ನಮ್ಮ ಬಳಿ ವಿನಂತಿ ಮಾಡಿಲ್ಲ. ಬೆಂಗಳೂರು ನಗರದಲ್ಲಿ ಯಾವುದೇ ಪಾದಯಾತ್ರೆಗೂ ಅವಕಾಶವಿಲ್ಲ ಎಂದು ತಿಳಿಸಿದ್ದರು.