ಮೈಸೂರು: ಮುಡಾ ಹಗರಣ ಖಂಡಿಸಿ ರಾಜ್ಯ ಸರ್ಕಾರದ ವಿರುದ್ಧ ಇಂದಿನಿಂದ ಬಿಜೆಪಿ-ಜೆಡಿಎಸ್ ಮೈಸೂರು ಚಲೋ ಪಾದಯಾತ್ರೆ ಆರಂಭವಾಗಿದ್ದು, ಆಗಸ್ಟ್ 10ರವರೆಗೆ ಪಾದಯಾತ್ರೆ ನಡೆಯಲಿದೆ.
ಪಾದಯಾತ್ರೆ ಆರಂಭಕ್ಕೂ ಮುನ್ನ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಚಾಮುಂಡಿ ಬೆಟ್ಟಕ್ಕೆ ತೆರಳಿ ನಾಡ ಅದಿದೇವತೆಗೆ ಪೂಜೆ ಸಲ್ಲಿಸಿದರು. ಈ ವೇಳೆ ಮಾತನಾಡಿದ ಬಿ.ವೈ.ವಿಜಯೇಂದ್ರ ಪಾದಯಾತ್ರೆಗೆ ನಿರೀಕ್ಷೆಗೂ ಮೀರಿ ಜನ ಬೆಂಬಲ ಸಿಗಲಿದೆ ಎಂದರು.
ಮುಡಾ ಹಗರಣ ನಡೆದಿದೆ. ಸಿಎಂ ಸಿದ್ದರಾಮಯ್ಯ ಓಡಿ ಹೋಗುವ ಕೆಲಸ ಮಾಡುತ್ತಿದ್ದಾರೆ. ಬಿಜೆಪಿ-ಜೆಡಿಎಸ್ ಪಾದಯಾತ್ರೆಗೆ ಪ್ರತಿಯಾಗಿ ಕಾಂಗ್ರೆಸ್ ನಾಯಕರು ರಾಮನಗರದಲ್ಲಿ ಜನಾಂದೋಲನ ಸಮವೇಶ ನಡೆಸುತ್ತಿದ್ದಾರೆ. ಇದ್ಯಾವುದಕ್ಕೂ ನಾವು ಬಗ್ಗುವ ಪ್ರಶ್ನೆಯೇ ಇಲ್ಲ ಎಂದು ಗುಡುಗಿದರು.
ಕುತಂತ್ರದಿಂದ ನಮ್ಮ ಹೋರಾಟವನ್ನು ಮಣಿಸುವ ದುರುದ್ದೇಶ ನಡೆಯಲ್ಲ. ಡಿ.ಕೆ.ಶಿವಕುಮಾರ್ ಅಧಿಕಾರ ಶಾಶ್ವತ ಎನ್ನುವ ಭ್ರಮೆಯಲ್ಲಿದ್ದಾರೆ. ಇದೆಲ್ಲದಕ್ಕೂ ನಾವು ಉತ್ತರ ಕೊಡುತ್ತೇವೆ ಎಂದು ವಾಗ್ದಾಳಿ ನಡೆಸಿದರು.