ಬೆಂಗಳೂರು: ದಕ್ಷಿಣ ಕರ್ನಾಟಕದಲ್ಲಿ ಬಿಜೆಪಿ ಗಾಳಿ ಬೀಸುತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
2023ರಲ್ಲಿ ರಾಜ್ಯದಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರಲಿದೆ. 2024 ರಲ್ಲಿ ದೆಹಲಿಯಲ್ಲಿ ಕೂಡ ಬಿಜೆಪಿ ಅಧಿಕಾರಕ್ಕೆ ಬರಲಿದೆ. ಮುಂದೆ ಮಂಡ್ಯದಿಂದಲೂ ಇನ್ನಷ್ಟು ಜನ ಪಕ್ಷವನ್ನು ಸೇರಲಿದ್ದಾರೆ ಎಂದು ಬಿಜೆಪಿ ಸೇರ್ಪಡೆ ಕಾರ್ಯಕ್ರಮದಲ್ಲಿ ಸಿಎಂ ಹೇಳಿದ್ದಾರೆ.
ಅನೇಕರು ಎರಡು ಪಕ್ಷಗಳ ಬಗ್ಗೆ ಭ್ರಮನಿರಸನಗೊಂಡಿದ್ದಾರೆ. ಹೀಗೆ ಭ್ರಮನಿರಸನಗೊಂಡು ನಮ್ಮ ಪಕ್ಷದ ಕಡೆಗೆ ಬರುತ್ತಿದ್ದಾರೆ. ದಕ್ಷಿಣ ಕರ್ನಾಟಕದ ಜನರು ರಾಜಕೀಯ ಪ್ರಬುದ್ಧರು ಎಂದರು.