ಬೆಂಗಳೂರು: ಕಾಂಗ್ರೆಸ್ ಪಕ್ಷದ 10 ಶಾಸಕರು ಶೀಘ್ರವೇ ಬಿಜೆಪಿಗೆ ಸೇರಲಿದ್ದಾರೆ ಎಂದು ಕಂದಾಯ ಸಚಿವ ಆರ್. ಅಶೋಕ್ ಹೇಳಿದ್ದಾರೆ.
ಬೊಮ್ಮನಹಳ್ಳಿಯ ಹೊಸಪಾಳ್ಯದಲ್ಲಿ ಬಿಜೆಪಿ ಮಹಿಳಾ ಮೋರ್ಚಾ ಹಮ್ಮಿಕೊಂಡಿದ್ದ ಲಲಿತಾ ಸಹಸ್ರನಾಮ ವಿಶೇಷ ಪೂಜಾ ಕಾರ್ಯಕ್ರಮದ ನಂತರ ಅವರು ಮಾತನಾಡಿ, ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಪಕ್ಷದ 10 ಶಾಸಕರು ಬಿಜೆಪಿಗೆ ಸೇರ್ಪಡೆಯಾಗಲಿದ್ದಾರೆ. ತಾಕತ್ತಿದ್ದರೆ ಅವರನ್ನು ಉಳಿಸಿಕೊಳ್ಳಲಿ ಎಂದು ಹೇಳಿದರು.
ಬೆಂಗಳೂರಿಗೆ ಪ್ರಧಾನಿ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಬರುತ್ತಾರೆ ಎಂದರೆ ಕಾಂಗ್ರೆಸ್ ನವರಲ್ಲಿ ಭಯ ಶುರುವಾಗುತ್ತದೆ. ಅವರದು ಸತ್ಯವಂತರ ಪಕ್ಷವಾಗಿದ್ದರೆ ತಮ್ಮ ಶಾಸಕರು ಬೇರೆ ಪಕ್ಷಕ್ಕೆ ಏಕೆ ಹೋಗುತ್ತಾರೆ ಎಂಬುದನ್ನು ಅರ್ಥಮಾಡಿಕೊಳ್ಳಬೇಕು ಎಂದರು.