ಚಾಮರಾಜನಗರ: ಕೊಳ್ಳೇಗಾಲ ಶಾಸಕ ಎನ್. ಮಹೇಶ್ ಬಿಜೆಪಿ ಸೇರುವುದು ಖಚಿತವಾಗಿದೆ. ಈ ಬಗ್ಗೆ ಮಾಹಿತಿ ನೀಡಿರುವ ಅವರು, ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಪಕ್ಷ ಸೇರುವಂತೆ ತಿಳಿಸಿದ್ದು, ಆದಷ್ಟು ಬೇಗನೆ ಬೆಂಗಳೂರಿನಲ್ಲಿ ಬಿಜೆಪಿಗೆ ಸೇರ್ಪಡೆಯಾಗುವುದಾಗಿ ತಿಳಿಸಿದ್ದಾರೆ.
ಮಾಜಿ ಸಿಎಂ ಯಡಿಯೂರಪ್ಪ ಬೊಮ್ಮಲಾಪುರಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಅವರೊಂದಿಗೆ ಸಮಾಲೋಚನೆ ನಡೆಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಮಹೇಶ್, ಬಿಜೆಪಿ ರಾಜ್ಯಾಧ್ಯಕ್ಷರೊಂದಿಗೆ ಮಾತುಕತೆ ನಡೆಸಿ ದಿನಾಂಕ ನಿಗದಿಪಡಿಸಿಕೊಂಡು ಆದಷ್ಟು ಬೇಗನೆ ಬೆಂಗಳೂರಿನಲ್ಲಿ ಬಿಜೆಪಿ ಸೇರಲಿದ್ದೇನೆ. ಬಿಜೆಪಿ ಸಾಕಷ್ಟು ಬದಲಾಗಿದೆ. ನಾನು ಬಿಜೆಪಿಗೆ ಹೋದರೆ ನನ್ನತನವನ್ನು ಬಿಟ್ಟುಕೊಡುವುದಿಲ್ಲ. ಷರತ್ತು ಇಲ್ಲದೆ ಬಿಜೆಪಿಗೆ ಸೇರುತ್ತಿದ್ದೇನೆ ಎಂದು ಹೇಳಿದ್ದಾರೆ.