ಚಾಮರಾಜನಗರ: ಕೊಳ್ಳೆಗಾಲ ಶಾಸಕ ಎನ್. ಮಹೇಶ್ ಆಗಸ್ಟ್ 5 ರಂದು ಬಿಜೆಪಿಗೆ ಸೇರ್ಪಡೆಯಾಗಲಿದ್ದಾರೆ. ಇತ್ತೀಚೆಗಷ್ಟೇ ಮಾಜಿ ಸಿಎಂ ಯಡಿಯೂರಪ್ಪ ಪಕ್ಷ ಸೇರುವಂತೆ ತಿಳಿಸಿದ್ದ ಹಿನ್ನೆಲೆಯಲ್ಲಿ ಬಿಜೆಪಿ ಸೇರಲು ದಿನಾಂಕ ಗೊತ್ತುಪಡಿಸಿಕೊಂಡು ಪಕ್ಷ ಸೇರುವುದಾಗಿ ಮಹೇಶ್ ಹೇಳಿದ್ದರು.
2018ರ ವಿಧಾನಸಭೆ ಚುನಾವಣೆಯಲ್ಲಿ ಬಿಎಸ್ಪಿಯಿಂದ ಸ್ಪರ್ಧಿಸಿ ಶಾಸಕರಾಗಿದ್ದ ಮಹೇಶ್ ಜೆಡಿಎಸ್-ಕಾಂಗ್ರೆಸ್ ಸಮ್ಮಿಶ್ರ ಸರ್ಕಾರದಲ್ಲಿ ಶಿಕ್ಷಣ ಸಚಿವರಾಗಿದ್ದರು. ನಂತರದ ಬೆಳವಣಿಗೆಯಲ್ಲಿ ಅವರು ರಾಜೀನಾಮೆ ನೀಡಿದ್ದರು. ಕುಮಾರಸ್ವಾಮಿ ವಿಶ್ವಾಸ ಮತಯಾಚನೆ ಮಾಡುವಾಗ ಸದನಕ್ಕೆ ಗೈರು ಹಾಜರಾಗಿದ್ದ ಹಿನ್ನೆಲೆಯಲ್ಲಿ ಅವರನ್ನು ಬಿಎಸ್ಪಿಯಿಂದ ಉಚ್ಚಾಟನೆ ಮಾಡಲಾಗಿತ್ತು. ಬಳಿಕ ಬಿಜೆಪಿಗೆ ಹತ್ತಿರವಾಗಿದ್ದ ಮಹೇಶ್ ಈಗ ಬಿಜೆಪಿ ಸೇರ್ಪಡೆಗೆ ಮುಹೂರ್ತ ನಿಗದಿಯಾಗಿದೆ. ಆಗಸ್ಟ್ 5 ರಂದು ಅವರು ಬಿಜೆಪಿಗೆ ಸೇರಲಿದ್ದಾರೆ.