alex Certify BIG NEWS: ಮತ್ತೊಬ್ಬ ಶಾಸಕ ಬಿಜೆಪಿ ಸೇರ್ಪಡೆಗೆ ಗ್ರೀನ್ ಸಿಗ್ನಲ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಮತ್ತೊಬ್ಬ ಶಾಸಕ ಬಿಜೆಪಿ ಸೇರ್ಪಡೆಗೆ ಗ್ರೀನ್ ಸಿಗ್ನಲ್

 ಚಾಮರಾಜನಗರ: ಕೊಳ್ಳೇಗಾಲ ಶಾಸಕ ಎನ್. ಮಹೇಶ್ ಬಿಜೆಪಿ ಸೇರುವುದು ಖಚಿತವಾಗಿದೆ. ಈ ಬಗ್ಗೆ ಮಾಹಿತಿ ನೀಡಿರುವ ಅವರು, ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಪಕ್ಷ ಸೇರುವಂತೆ ತಿಳಿಸಿದ್ದು, ಆದಷ್ಟು ಬೇಗನೆ ಬೆಂಗಳೂರಿನಲ್ಲಿ ಬಿಜೆಪಿಗೆ ಸೇರ್ಪಡೆಯಾಗುವುದಾಗಿ ತಿಳಿಸಿದ್ದಾರೆ.

ಮಾಜಿ ಸಿಎಂ ಯಡಿಯೂರಪ್ಪ ಬೊಮ್ಮಲಾಪುರಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಅವರೊಂದಿಗೆ ಸಮಾಲೋಚನೆ ನಡೆಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಮಹೇಶ್, ಬಿಜೆಪಿ ರಾಜ್ಯಾಧ್ಯಕ್ಷರೊಂದಿಗೆ ಮಾತುಕತೆ ನಡೆಸಿ ದಿನಾಂಕ ನಿಗದಿಪಡಿಸಿಕೊಂಡು ಆದಷ್ಟು ಬೇಗನೆ ಬೆಂಗಳೂರಿನಲ್ಲಿ ಬಿಜೆಪಿ ಸೇರಲಿದ್ದೇನೆ. ಬಿಜೆಪಿ ಸಾಕಷ್ಟು ಬದಲಾಗಿದೆ. ನಾನು ಬಿಜೆಪಿಗೆ ಹೋದರೆ ನನ್ನತನವನ್ನು ಬಿಟ್ಟುಕೊಡುವುದಿಲ್ಲ. ಷರತ್ತು ಇಲ್ಲದೆ ಬಿಜೆಪಿಗೆ ಸೇರುತ್ತಿದ್ದೇನೆ ಎಂದು ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...