alex Certify ಮಾಜಿ ಕ್ರಿಕೆಟಿಗ ದೊಡ್ಡ ಗಣೇಶ್, ಮಾಜಿ ಸಂಸದ ಶಿವರಾಮಗೌಡ ಬಿಜೆಪಿ ಸೇರ್ಪಡೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮಾಜಿ ಕ್ರಿಕೆಟಿಗ ದೊಡ್ಡ ಗಣೇಶ್, ಮಾಜಿ ಸಂಸದ ಶಿವರಾಮಗೌಡ ಬಿಜೆಪಿ ಸೇರ್ಪಡೆ

ಬೆಂಗಳೂರು: ಮಾಜಿ ಕ್ರಿಕೆಟಿಗ ದೊಡ್ಡ ಗಣೇಶ್ ಇಂದು ಬಿಜೆಪಿಗೆ ಸೇರ್ಪಡೆಯಾಗಲಿದ್ದಾರೆ ಮಧ್ಯಾಹ್ನ 12 ಗಂಟೆಗೆ ಮಲ್ಲೇಶ್ವರಂ ಬಿಜೆಪಿ ಕಚೇರಿಯಲ್ಲಿ ಅವರು ಬಿಜೆಪಿಗೆ ಸೇರ್ಪಡೆಯಾಗಲಿದ್ದಾರೆ.

ಈ ಹಿಂದೆ ಜೆಡಿಎಸ್ ಪಕ್ಷದಲ್ಲಿ ದೊಡ್ಡ ಗಣೇಶ್ ಗುರುತಿಸಿಕೊಂಡಿದ್ದರು. ಈಗ ಲೋಕಸಭೆ ಚುನಾವಣೆ ಸಂದರ್ಭದಲ್ಲಿ ಅವರು ಬಿಜೆಪಿ ಸೇರಲಿದ್ದು, ಪಕ್ಷದ ಪರ ಪ್ರಚಾರ ನಡೆಸಲಿದ್ದಾರೆ.

ಕೊಪ್ಪಳ ಮಾಜಿ ಸಂಸದ ಶಿವರಾಮಗೌಡ ಇಂದು ಬಿಜೆಪಿಗೆ ಸೇರ್ಪಡೆಯಾಗಲಿದ್ದಾರೆ. ಮಾಜಿ ಸಿಎಂ ಯಡಿಯೂರಪ್ಪ ಸಮ್ಮುಖದಲ್ಲಿ ಶಿವರಾಮಗೌಡ ಬಿಜೆಪಿ ಸೇರ್ಪಡೆಯಾಗುವರು. ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ಪಕ್ಷ ಸೇರ್ಪಡೆ ಕಾರ್ಯಕ್ರಮ ನಡೆಯಲಿದೆ. 2009ರಲ್ಲಿ ಕೊಪ್ಪಳ ಕ್ಷೇತ್ರದಲ್ಲಿ ಗೆದ್ದು ಶಿವರಾಮಗೌಡ ಸಂಸದರಾಗಿದ್ದರು. 2013ರಲ್ಲಿ ಟಿಕೆಟ್ ಸಿಗದ ಕಾರಣ ಕಾಂಗ್ರೆಸ್ ಪಕ್ಷಕ್ಕೆ ಸೇರಿದ್ದರು. ಮೂರು ದಿನದ ಹಿಂದೆ ಬಿಜೆಪಿ ಮುಖಂಡರು ಅವರನ್ನು ಭೇಟಿಯಾಗಿ ಬಿಜೆಪಿಗೆ ಬರುವಂತೆ ಮನವಿ ಮಾಡಿದ್ದರು. ಕಾಂಗ್ರೆಸ್ ನಲ್ಲಿ ಕಡೆಗಣನೆ ಹಿನ್ನೆಲೆ ಶಿವರಾಮಗೌಡ ಇಂದು ಬಿಜೆಪಿ ಸೇರಲಿದ್ದಾರೆ. ಮೊನ್ನೆಯಷ್ಟೇ ಅವರು ಕಾಂಗ್ರೆಸ್ ಗೆ ರಾಜೀನಾಮೆ ನೀಡಿದ್ದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...