ನವದೆಹಲಿ: ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಅವರಿಗೆ ತಮಿಳುನಾಡು, ಮಹಾರಾಷ್ಟ್ರ, ಗೋವಾ ರಾಜ್ಯಗಳ ಉಸ್ತುವಾರಿ ನೀಡಲಾಗಿದೆ.
ಕರ್ನಾಟಕ ಬಿಜೆಪಿ ಉಸ್ತುವಾರಿಯಾಗಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಉತ್ತರ ಪ್ರದೇಶದ ಅರುಣ್ ಸಿಂಗ್ ಅವರನ್ನು ನೇಮಕ ಮಾಡಲಾಗಿದೆ. ತೆಲಂಗಾಣದ ಬಿಜೆಪಿ ನಾಯಕಿ ಡಿ.ಕೆ. ಅರುಣ ಅವರನ್ನು ಸಹಾಯಕ ಉಸ್ತುವಾರಿಯಾಗಿ ನಿಯೋಜಿಸಲಾಗಿದೆ.
ಇನ್ನು ರಾಜ್ಯದ ಬಿಜೆಪಿ ನಾಯಕ ಸುನೀಲ್ ಕುಮಾರ್ ಅವರಿಗೆ ಕೇರಳ ಸಹ ಉಸ್ತುವಾರಿ ನೀಡಲಾಗಿದೆ. ನಿರ್ಮಲಕುಮಾರ್ ಸುರಾನಾ ಪುದುಚೇರಿ ಉಸ್ತುವಾರಿಯಾಗಿ ನಿಯೋಜಿತರಾಗಿದ್ದಾರೆ.