alex Certify ರಾಜ್ಯ ಸರ್ಕಾರದ ವಿರುದ್ಧ ‘ಕಾವೇರಿ ಅಸ್ತ್ರ’ ಪ್ರಯೋಗಿಸಲು ಮುಂದಾದ ಬಿಜೆಪಿ: ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ ವಿರೋಧಿಸಿ ಮಂಡ್ಯದಲ್ಲಿಂದು ಮಹತ್ವದ ಸಭೆ; ಸುಮಲತಾ ಭಾಗಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರಾಜ್ಯ ಸರ್ಕಾರದ ವಿರುದ್ಧ ‘ಕಾವೇರಿ ಅಸ್ತ್ರ’ ಪ್ರಯೋಗಿಸಲು ಮುಂದಾದ ಬಿಜೆಪಿ: ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ ವಿರೋಧಿಸಿ ಮಂಡ್ಯದಲ್ಲಿಂದು ಮಹತ್ವದ ಸಭೆ; ಸುಮಲತಾ ಭಾಗಿ

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆಗೆ ಬಿಜೆಪಿ ವಿರೋಧ ವ್ಯಕ್ತಪಡಿಸಿದ್ದು, ಮುಂದಿನ ಹೋರಾಟದ ರೂಪುರೇಷೆ ಸಿದ್ಧಪಡಿಸಲು ಮಂಡ್ಯದಲ್ಲಿಂದು ಮಹತ್ವದ ಸಭೆ ನಡೆಸಲಾಗುವುದು.

ರಾಜ್ಯ ಸರ್ಕಾರದ ವಿರುದ್ಧ ಕಾವೇರಿ ಅಸ್ತ್ರ ಪ್ರಯೋಗಿಸಲು ಬಿಜೆಪಿ ಮುಂದಾಗಿದೆ. ಇಂದು 5 ಜಿಲ್ಲೆಗಳ ಬಿಜೆಪಿ ಸಂಸದರು, ಶಾಸಕರು, ವಿಧಾನ ಪರಿಷತ್ ಸದಸ್ಯರು, ಪರಾಜಿತ ಅಭ್ಯರ್ಥಿಗಳು, ಮುಖಂಡರ ಸಭೆ ನಡೆಸಲಾಗುವುದು. ಬಿಜೆಪಿ ಸಭೆಯಲ್ಲಿ ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಭಾಗವಹಿಸಲಿದ್ದಾರೆ.

ಕಾವೇರಿ ನದಿ ನೀರು ವಿಚಾರದ ಬಗ್ಗೆ ಚರ್ಚೆ ನಡೆಸಲಿದ್ದು, ಮುಂದಿನ ಹೋರಾಟದ ರೂಪುರೇಷೆ ಕುರಿತು ಸಮಾಲೋಚನೆ ನಡೆಸಲಾಗುವುದು. ಮಂಡ್ಯ, ರಾಮನಗರ, ಬೆಂಗಳೂರು ಗ್ರಾಮಾಂತರ, ಹಾಸನ, ಚಾಮರಾಜನಗರ, ಮೈಸೂರು ಜಿಲ್ಲೆಯ ಬಿಜೆಪಿ ಪ್ರತಿನಿಧಿಗಳು, ಪರಾಜಿತ ಅಭ್ಯರ್ಥಿಗಳು ಮುಖಂಡರು ಭಾಗವಹಿಸಲಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...