ಬೆಂಗಳೂರು: ಪರೀಕ್ಷೆ ಮೇಲೆ ಪರೀಕ್ಷೆಗಳನ್ನು ನಡೆಸಿದರೂ ಕೆಪಿಎಸ್‌ಸಿ ಪ್ರಶ್ನೆ ಪತ್ರಿಕೆಯಲ್ಲಿ ದೋಷ, ಅನುವಾದದಲ್ಲಿ ದೋಷ, ಪರೀಕ್ಷಾ ವೇಳಾಪಟ್ಟಿ, ಫಲಿತಾಂಶದಲ್ಲಿ ಗೊಂದಲ, ಪ್ರಶ್ನೆಪತ್ರಿಕೆ ಸೋರಿಕೆ, ಅವ್ಯವಹಾರ, ಭ್ರಷ್ಟಾಚಾರ ಇದು ಕೆಪಿಎಸ್‌ಸಿ ಸಂಸ್ಥೆ ಕುರಿತಾಗಿ ಸಾರ್ವಜನಿಕರಿಗೆ ಇರುವ ನಿಲುವಾಗಿದೆ. ಕೆಪಿಎಸ್ ಸಿ ನಂಬಿಕೆ ಕಳೆದುಕೊಂಡಿದೆ ಎಂದು ರಾಜ್ಯ ಬಿಜೆಪಿ ವಾಗ್ದಾಳಿ ನಡೆಸಿದೆ.
ವಿದ್ಯಾರ್ಥಿಗಳು ಭ್ರಷ್ಟ ಕಾಂಗ್ರೆಸ್ ವಿರುದ್ಧ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ನಿರಂತರ ಹೋರಾಟ ಮಾಡಿದರೂ ಅವರ ಕೂಗಿಗೆ ಮನ್ನಣೆ ದೊರಕಿಲ್ಲ. ಕೆಪಿಎಸ್‌ಸಿ ನಡೆಸುವ ಪರೀಕ್ಷೆಯಲ್ಲಿ ಪ್ರತಿ ಬಾರಿಯು ಅಭ್ಯರ್ಥಿಗಳಿಗೆ ಅನ್ಯಾಯ ನಡೆದರೂ ಅದನ್ನು ಸರಿಪಡಿಸುವ ಕೆಲಸವನ್ನು ಸರ್ಕಾರವಿನ್ನೂ ಮಾಡಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದೆ.
ಇನ್ನಾದರೂ ಕಾಂಗ್ರೆಸ್ ಸರ್ಕಾರ ಎಚ್ಚೆತ್ತುಕೊಂಡು ಕೆಪಿಎಸ್‌ಸಿ ಗೊಂದಲವನ್ನು ಸರಿಪಡಿಸುವ ಕೆಲಸವನ್ನು ಮಾಡಬೇಕು ಎಂದು ಬಿಜೆಪಿ ಆಗ್ರಹಿಸಿದೆ.