alex Certify ಬಿಜೆಪಿ ಮುಖಂಡನ ಕಾರ್ ಮೇಲೆ ಕಲ್ಲು ತೂರಾಟ: ತಡರಾತ್ರಿ ಪೊಲೀಸ್ ಠಾಣೆ ಎದುರು ಪ್ರತಿಭಟನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬಿಜೆಪಿ ಮುಖಂಡನ ಕಾರ್ ಮೇಲೆ ಕಲ್ಲು ತೂರಾಟ: ತಡರಾತ್ರಿ ಪೊಲೀಸ್ ಠಾಣೆ ಎದುರು ಪ್ರತಿಭಟನೆ

ಚಿತ್ರದುರ್ಗ: ಚಳ್ಳಕೆರೆ ಬಿಜೆಪಿ ಮಂಡಲ ಅಧ್ಯಕ್ಷನ ಕಾರ್ ಮೇಲೆ ಕಲ್ಲು ತೂರಾಟ ನಡೆಸಲಾಗಿದೆ. ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ವಿಧಾನಸಭಾ ಕ್ಷೇತ್ರದ ಬೆಳಗಟ್ಟ ಗ್ರಾಮದ ಬಳಿ ಕಾರ್ ಮೇಲೆ ಕಲ್ಲು ತೂರಾಟ ನಡೆಸಲಾಗಿದೆ.

ಬೆಳಗಟ್ಟ ಗ್ರಾಮದಲ್ಲಿ ನಿನ್ನೆ ರಾತ್ರಿ 9:30 ವೇಳೆಗೆ ಕಾರಿನ ಮೇಲೆ ಕಲ್ಲು ತೂರಾಟ ನಡೆಸಲಾಗಿದೆ. ಸೂರನಹಳ್ಳಿ ಶ್ರೀನಿವಾಸ್ ಅವರು ಬೆಳಗಟ್ಟ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಂಡಿದ್ದಾರೆ.

ಕಾಂಗ್ರೆಸ್ ಕಾರ್ಯಕರ್ತರು ಕಲ್ಲು ತೂರಾಟ ನಡೆಸಿದ್ದಾರೆ ಎಂದು ಬಿಜೆಪಿ ಮುಖಂಡರು ಆರೋಪಿಸಿದ್ದಾರೆ. ಆರೋಪಿಗಳ ಬಂಧನಕ್ಕೆ ಆಗ್ರಹಿಸಿ ತುರುವನೂರು ಪೊಲೀಸ್ ಠಾಣೆ ಎದುರು ತಡರಾತ್ರಿ ಪ್ರತಿಭಟನೆ ನಡೆಸಲಾಗಿದೆ. ಬಿಜೆಪಿ ಅಭ್ಯರ್ಥಿ ಅನಿಲ್ ಕುಮಾರ್ ನೇತೃತ್ವದಲ್ಲಿ ಪಕ್ಷದ ಕಾರ್ಯಕರ್ತರು ಪ್ರತಿಭಟನೆ ನಡೆಸಿ ದುಷ್ಕರ್ಮಿಗಳ ಬಂಧನಕ್ಕೆ ಒತ್ತಾಯಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...