
ಹಾಸನ: ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಮುಖಂಡ, ವಕೀಲ ದೇವರಾಜೇಗೌಡನನ್ನು ಹಾಸನ ಜಿಲ್ಲೆಯ ಹೊಳೆನರಸೀಪುರ ಪೊಲೀಸರು ಬಂಧಿಸಿದ್ದಾರೆ.
ದೇವರಾಜೇಗೌಡ ವಿರುದ್ಧ ಏಪ್ರಿಲ್ 1ರಂದು ಲೈಂಗಿಕ ಕಿರುಕುಳ ಪ್ರಕರಣ ದಾಖಲಾಗಿತ್ತು. ಮೇ 10ರಂದು ಸಂತ್ರಸ್ತೆಯ ಹೇಳಿಕೆ ಪಡೆದ ಪೊಲೀಸರು, ಅತ್ಯಾಚಾರ ಕೇಸ್ ದಾಖಲಿಸಿದ್ದರು. ಬಳಿಕ ತಡರಾತ್ರಿ ಚಿತ್ರದುರ್ಗದ ಬಳಿ ದೇವರಾಜೇಗೌಡ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದರು.
ಇದೀಗ ವಿಚಾರಣೆ ಬಳಿಕ ದೇವರಾಜೆಗೌಡ ಅವರನ್ನು ಪೊಲೀಸರು ಬಂಧಿಸಿದ್ದಾರೆ. ವೈದ್ಯಕೀಯ ತಪಾಸಣೆ ಬಳಿಕ ನ್ಯಾಯಾಧೀಶರ ಮುಂದೆ ಹಾಜರುಪಡಿಸುವ ಸಾಧ್ಯತೆ ಇದೆ.