
ಶ್ರೀನಗರ: ಮಾಜಿ ಶಾಸಕ, ಬಿಜೆಪಿ ನಾಯಕ ಫಕೀರ್ ಮೊಹಮ್ಮದ್ ಖಾನ್ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಜಮ್ಮು-ಕಾಶ್ಮೀರದಲ್ಲಿ ನಡೆದಿದೆ.
ಈ ಬಗ್ಗೆ ಪೊಲೀಸರು ಮಾಹಿತಿ ನೀಡಿದ್ದು, ಫಕೀರ್ ಮೊಹಮ್ಮದ್ ಖಾನ್ (62) ತುಳಸಿಬಾಗ್ ನ ಸರ್ಕಾರಿ ವಸತಿಗೃಹದಲ್ಲಿಯೇ ಆತ್ಮಹತ್ಯೆಗೆ ಶರಣಾಗಿದ್ದಾರೆ. ಗುಂಡು ಹಾರಿಸಿಕ್ಂಡು ಸಾವಿಗೆ ಶರಣಾಗಿದ್ದಾರೆ. ಅವರ ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ, ತನಿಖೆ ನಡೆಯುತ್ತಿದೆ ಎಂದು ತಿಳಿಸಿದ್ದಾರೆ.
1996ರಲ್ಲಿ ಪಕ್ಷೇತರ ಅಭ್ಯರ್ಥಿಇಯಾಗಿ ಜಮ್ಮು-ಕಾಶ್ಮೀರ ವಿಧಾನಸಭೆಗೆ ಆಯ್ಕೆಯಾಗಿದ್ದರು. 2020ರಲ್ಲಿ ಬಿಜೆಪಿ ಸೇರಡೆಯಾಗಿದ್ದ ಖಾನ್, ಕೆಲ ತಿಂಗಳ ಹಿಂದೆ ವಿಇಧಾನಸಭೆಗೆ ನಡೆದ ಚುನಾವಣೆಗೆ ಬಿಜೆಪಿ ಟಿಕೆಟ್ ಪಡೆಯಲು ವಿಫಲರಾಗಿದ್ದರು.
ಫಕೀರ್ ಮೂಹಮ್ಮದ್ ಖಾನ್ ನಿಧನಕ್ಕೆ ಜಮ್ಮು-ಕಾಶ್ಮೀರ ಸಿಎಂ ಒಮರ್ ಅಬ್ದುಲ್ಲಾ ಸಂತಾಪ ಸೂಚಿಸಿಸಿದ್ದಾರೆ.