
ಬಿಜೆಪಿ ನಾಯಕನೊಬ್ಬ ಪತ್ನಿ ಹಾಗೂ ಮೂವರು ಮಕ್ಕಳ ಮೇಲೆ ಗುಂಡಿನ ದಾಳಿ ನಡೆಸಿದ್ದು, ಇಬ್ಬರು ಮಕ್ಕಳು ಸಾವನ್ನಪ್ಪಿರುವ ಘಟನೆ ನಡೆದಿದೆ.
ಉತ್ತರ ಪ್ರದೇಶದ ಸಹಾರನ್ ಪುರದಲ್ಲಿ ಈ ಘಟನೆ ನಡೆದಿದೆ. ಬಿಜೆಪಿ ನಾಯಕ ಯೋಗೇಶ್ ರೋಹಿಲ್ಲಾ, ಪತ್ನಿ ಹಾಗೂ ಮೂವರ ಮಕ್ಕಳ ಮೇಲೆ ಫೈರಿಂಗ್ ನಡೆಸಿದ್ದು, ಗುಂಡೇಟಿಗೆ ಇಬ್ಬರು ಮಕ್ಕಳು ಬಲಿಯಾಗಿದ್ದಾರೆ. ಪತ್ನಿ ಹಾಗೂ ಇನ್ನೋರ್ವ ಮಗನ ಸ್ಥಿತಿ ಗಂಭೀರವಾಗಿದೆ.
ಸಹರಾನ್ ಪುರ ಪೊಲೀಸರು ಆರೋಪಿ ಯೋಗೇಶ್ ರೋಹಿಲ್ಲಾನನ್ನು ವಶಕ್ಕೆ ಪಡೆದಿದ್ದಾರೆ. ಯೋಗೇಶ್ ರೋಹಿಲ್ಲಾ ಹಲವು ದಿನಗಳಿಂದ ಮಾನಸಿಕ ಒತ್ತಡದಲ್ಲಿದ್ದರು ಎನ್ನಲಾಗಿದೆ. ಆದರೆ ಏಕಾಏಕಿ ಮಕ್ಕಳು ಹಾಗೂ ಪತ್ನಿಯ ಮೇಲೆ ಗುಂಡಿನ ದಾಳಿ ನಡೆಸಿದ್ದು, ಅಕ್ಕಪಕ್ಕದ ನಿವಾಸಿಗಳಲ್ಲಿಯೂ ಆಘಾತವನ್ನುಂಟುಮಾಡಿದೆ.