
ತುಮಕೂರು: ಬಿಜೆಪಿ ಮುಖಂಡ, ಗುಬ್ಬಿ ಪಟ್ಟಣ ಪಂಚಾಯತ್ ಮಾಜಿ ಅಧ್ಯಕ್ಷನನ್ನು ಹನಿಟ್ರ್ಯಾಪ್ ಖೆಡ್ಡಾಗೆ ಕೆಡವಿ ಲಕ್ಷ ಲಕ್ಷ ವಸೂಲಿ ಮಾಡುತ್ತಿದ್ದ ಯುವತಿಯನ್ನು ಪೊಲೀಸರು ಬಂದಿಸಿದ್ದಾರೆ.
ನಿಶಾ ಬಂಧಿತ ಆರೋಪಿ. ತುಮಕೂರಿನ ಕ್ಯಾತಸಂದ್ರ ನಿವಾಸಿ ನಿಶಾ, ಗುಬ್ಬಿ ಪಟ್ಟಣ ಪಂಚಾಯತ್ ಮಾಜಿ ಅಧ್ಯಕ್ಷ ಅಣ್ಣಪ್ಪಸ್ವಾಮಿಗೆ ಹನಿಟ್ರ್ಯಾಪ್ ಮಾಡಿ ಸಿಕ್ಕಿಬಿದ್ದಿದ್ದಾಳೆ.
ನಿಶಾ ಬೆತ್ತಲೆ ವಿಡಿಯೋ ಇಟ್ಟುಕೊಂಡು 20 ಲಕ್ಷಕ್ಕೆ ಬೇಡಿಕೆ ಇಟ್ಟಿದ್ದಳು. ಹಣ ಕೊಡದ್ದರೆ ರೇಪ್ ಕೇಸ್ ಹಾಕುವುದಾಗಿ ಬೆದರಿಸಿದ್ದಳು. ಆರಂಭದಲ್ಲಿ ಫೇಸ್ ಬುಕ್ ಮೂಲಕ ಅಣ್ಣಪ್ಪಸ್ವಾಮಿಗೆ ಫ್ರೆಂಡ್ಸ್ ರಿಕ್ವೆಸ್ಟ್ ಕಳುಹಿಸಿದ್ದಳು. ಹೀಗೆ ಆರಂಭವಾದ ಪರಿಚಯ ಗುಡ್ ಮಾರ್ನಿಂಗ್, ಗುಡ್ ನೈಟ್ ಎಂದು ಪ್ರತಿದಿನಮೆಸೇಜ್ ಗಳ ಮೂಲಕ ಹತ್ತಿರವಾಗಿದ್ದಳು. ಬಳಿಕ ಲಾಡ್ಜ್ ಗೆ ಕರೆದೊಯ್ದು ಖಾಸಗಿ ಸಂದರ್ಭಗಳನ್ನು ಸೆರೆಹಿಡಿದುಕೊಂಡಿದ್ದಾಳೆ.
ಬಳಿಕ ಬ್ಲ್ಯಾಕ್ ಮೇಲ್ ಮಾಡಿ ಲಕ್ಷ ಲಕ್ಷ ಹಣ ಪಡೆದಿದ್ದ ನಿಶಾ, 20 ಲಕ್ಷಕ್ಕೆ ಬೇಡಿಕೆ ಇಟ್ಟಿದ್ದಳು. ಅಲ್ಲದೇ ಆಕೆಯ ಕಡೆಯ ಇಬ್ಬರು ಹುಡುಗರು ಕೂಡ ಬೆದರಿಕೆ ಹಾಕಿ ಸೋಷಿಯಲ್ ಮೀಡಿಯಾಗಳಲ್ಲಿ ವಿಡಿಯೋ ಹರಿಬಿಡುವುದಾಗಿ ಬೆದರಿಸಿದ್ದರು. ಗುಬ್ಬಿ ಠಾಣೆಯಲ್ಲಿ ಅನ್ಣಪ್ಪಸ್ವಾಮಿ ದೂರು ನೀಡಿದ್ದರು.
ಪ್ರಕರಣ ದಾಖಲಿಸಿಕೊಂಡಿರುವ ನಿಶಾ ಹಾಗೂ ಗ್ಯಾಂಗ್ ನ್ನು ಬಂಧಿಸಿದ್ದಾರೆ.