ಬೆಳಗಾವಿಯಲ್ಲಿ ಬಿಜೆಪಿ ಮುಖಂಡ ಪೃಥ್ವಿ ಸಿಂಗ್ ಅವರಿಗೆ ಚಾಕುವಿನಿಂದ ಇರಿಯಲಾಗಿದೆ ರಾಜ್ಯ ಬಿಜೆಪಿ ಕಾರ್ಯಕಾರಿಣಿ ಸದಸ್ಯ ಪೃಥ್ವಿ ಸಿಂಗ್ ಕೈ, ಬೆನ್ನಿಗೆ ಗಾಯಗಳಾಗಿದ್ದು, ಕೆಎಲ್ಇ ಆಸ್ಪತ್ರೆಗೆ ದಾಖಲಿಸಲಾಗಿದೆ.
ಮಾಜಿ ಸಚಿವ ರಮೇಶ ಜಾರಕಿಹೊಳಿ ಅತ್ಯಾಪ್ತನಾಗಿರುವ ಪೃಥ್ವಿ ಸಿಂಗ್ ಮೇಲೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಸಹೋದರ, ಕಾಂಗ್ರೆಸ್ ಎಂಎಲ್ಸಿ ಚನ್ನರಾಜ ಹಟ್ಟಿಹೊಳಿ ಆಪ್ತರು ಹಲ್ಲೆ ನಡೆಸಿದ ಆರೋಪ ಕೇಳಿ ಬಂದಿದೆ.
ಸದ್ದಾಂ, ಸುಜಯ್ ಜಾಧವ್, ಚನ್ನರಾಜ ಬಾಡಿಗಾರ್ಡ್ ಹಲ್ಲೆ ಮಾಡಿದ ಆರೋಪ ಕೇಳಿ ಬಂದಿದೆ. ಪೃಥ್ವಿ ಸಿಂಗ್ ಜೊತೆಗೆ ಚನ್ನರಾಜ ಆಪ್ತರ ಚರ್ಚೆಯ ದೃಶ್ಯ ಸೆರೆಯಾಗಿದೆ. ಕೆಎಲ್ಇ ಆಸ್ಪತ್ರೆಗೆ ಬಿಜೆಪಿ ವಿಧಾನ ಪರಿಷತ್ ಸದಸ್ಯ ಚಲವಾದಿ ನಾರಾಯಣಸ್ವಾಮಿ, ಕೇಶವ ಪ್ರಸಾದ್ ಭೇಟಿ ನೀಡಿ ಗಾಯಾಳು ಪೃಥ್ವಿ ಸಿಂಗ್ ಆರೋಗ್ಯ ವಿಚಾರಿಸಿದ್ದಾರೆ.