ಕೊಲ್ಕತ್ತಾ: ಬಿಜೆಪಿ ಯುವ ನಾಯಕಿ ಪಮೇಲಾ ಗೋಸ್ವಾಮಿ ಅವರನ್ನು ಬಂಧಿಸಲಾಗಿದ್ದು, ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.
ಬಿಜೆಪಿ ಜನತಾ ಯುವ ಮೋರ್ಚಾ ರಾಜ್ಯ ಕಾರ್ಯದರ್ಶಿ ಪಮೇಲಾ ಗೋಸ್ವಾಮಿ ಮತ್ತು ಅವರ ಭದ್ರತಾ ಸಿಬ್ಬಂದಿಯಾದ ಸ್ನೇಹಿತ ಪ್ರದೀಪ್ ಕುಮಾರ್ ಅವರು 90 ಗ್ರಾಂ ಕೊಕೇನ್ ಹೊಂದಿದ ಹಿನ್ನೆಲೆಯಲ್ಲಿ ಬಂಧಿಸಲಾಗಿದೆ.
ದಕ್ಷಿಣ ಕೊಲ್ಕತ್ತಾದ ನ್ಯೂ ಆಲಿಪೊರಾ ಪ್ರದೇಶದಲ್ಲಿ ಪಮೇಲಾ ಅವರ ಬ್ಯಾಗ್ ನಲ್ಲಿ ಲಕ್ಷಾಂತರ ರೂಪಾಯಿ ಮೌಲ್ಯದ ಕೊಕೇನ್ ಪತ್ತೆಯಾದ ಹಿನ್ನೆಲೆಯಲ್ಲಿ ಅವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ. ಆದರೆ ಪಕ್ಷದ ನಾಯಕ ಕೈಲಾಶ್ ವಿಜಯವರ್ಗಿಯಾ ಅವರ ಸಹಾಯಕ ರಾಕೇಶ್ ಸಿಂಗ್ ಪಿತೂರಿಯಿಂದ ಈ ಬೆಳವಣಿಗೆ ನಡೆದಿದೆ. ಆತನನ್ನು ಬಂಧಿಸಿ ಪ್ರಕರಣವನ್ನು ಸಿಐಡಿಗೆ ವಹಿಸಬೇಕೆಂದು ಪಮೇಲಾ ಗೋಸ್ವಾಮಿ ಒತ್ತಾಯಿಸಿದ್ದಾರೆ. ಫೆಬ್ರವರಿ 25 ರವರೆಗೆ ಅವರನ್ನು ಪೊಲೀಸ್ ಕಸ್ಟಡಿಗೆ ವಹಿಸಲಾಗಿದೆ.