
ಬೆಂಗಳೂರು: ಬಿಜೆಪಿ ಮುಖಂಡ ಯೋಗೀಶ್ ಗೌಡ ಕೊಲೆ ಪ್ರಕರಣ ರದ್ದು ಕೋರಿ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾ ಮಾಡಿದೆ.
ವಿನಯ್ ಕುಲಕರ್ಣಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ನ್ಯಾಯಮೂರ್ತಿ ಕೃಷ್ಣ ಎಸ್.ದೀಕ್ಷಿತ್ ಅವರಿದ್ದ ಹೈಕೋರ್ಟ್ ಪೀಠ ಅರ್ಜಿ ವಜಾಗೊಳಿಸಿದೆ. ಈ ಮೂಲಕ ವಿನಯ್ ಕುಲಕರ್ಣಿಗೆ ಹಿನ್ನಡೆಯಾಗಿದೆ.
ಪ್ರಕರಣ ಸಂಬಂಧ ಸಾಕ್ಷ್ಯ ವಿಚಾರಣೆ ಪ್ರಕ್ರಿಯೆ ಶೀಘ್ರ ಪೂರ್ಣಗೊಳಿಸಬೇಕು ಎಂದು ಸಿಬಿಐ ಪರ ವಕೀಲರಿಗೆ ಹೈಕೋರ್ಟ್ ಸೂಚನೆ ನೀಡಿದೆ.