ಬೆಂಗಳೂರು : ಪ್ರಧಾನಿ ಮೋದಿ ಭೇಟಿಯಾಗಲು ರಾಜ್ಯ ಬಿಜೆಪಿ ನಾಯಕರಿಗೆ ಅವಕಾಶ ಸಿಕ್ಕಿಲ್ಲ, ಪ್ರಧಾನಿ ಮುಂದೆ ಬ್ಯಾರಿಕೆಡ್ ಬಂಧಿಗಳಾದ ಬಿಜೆಪಿ ನಾಯಕರು ಎಂದು ಸಚಿವ ಪ್ರಿಯಾಂಕ್ ಖರ್ಗೆ ಕೂಡ ವ್ಯಂಗ್ಯವಾಡಿದ್ದಾರೆ.
ಬಿಜೆಪಿ ನಾಯಕರು ಪ್ರಧಾನಿ ಮುಂದೆ ಬ್ಯಾರಿಕೆಡ್ ಬಂಧಿಗಳಾಗಿ ಗಮನ ಸೆಳೆಯಲು ಹರಸಾಹಸ ಪಡುತ್ತಿದ್ದಾರೆ. ಸ್ವಾಭಿಮಾನ, ಆತ್ಮಗೌರವ ಬೀದಿಪಾಲು ಮಾಡಿಕೊಂಡಿದ್ದು, ರಾಜ್ಯ ಬಿಜೆಪಿ ನಾಯಕರ ದುರಾವಸ್ಥೆ ನೋಡಿ ಕರುಣೆ ಹುಟ್ಟುತ್ತಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ವ್ಯಂಗ್ಯವಾಡಿದ್ದಾರೆ.
ತಿರಸ್ಕಾರಕ್ಕೆ ಒಳಪಟ್ಟಿರುವಾಗ ವಿಪಕ್ಷ ನಾಯಕನ ಆಯ್ಕೆ ಸಾಧ್ಯ ಹೇಗೆ ಆಗುತ್ತದೆ. ಬಿಜೆಪಿಗರೂ ಸರ್ವಾಧಿಕಾರದ ಸಂತ್ರಸ್ತರಾಗಿದ್ದಾರೆ. ಎಂದು ಬಿಜೆಪಿ ನಾಯಕರ ಬಗ್ಗೆ ಪ್ರಿಯಾಂಕ್ ಖರ್ಗೆ ಟ್ವೀಟ್ ಮಾಡುವ ಮೂಲಕ ವ್ಯಂಗ್ಯವಾಡಿದ್ದಾರೆ.
ರಾಜಕೀಯವಾಗಿ, ಸೈದ್ದಂತಿಕವಾಗಿ ವಿರೋಧಿಗಳಾಗಿದ್ದರೂ ನಾಯಕರ ದುರಾವಸ್ಥೆ ನೋಡಿ ಕರುಣೆ ಹುಟ್ಟುತ್ತಿದೆ! ಪ್ರಧಾನಿ ಮುಂದೆ ಬ್ಯಾರಿಕೆಡ್ ಬಂಧಿಗಳಾಗಿ ಗಮನ ಸೆಳೆಯಲು ಹರಸಾಹಸ ಮಾಡುತ್ತಿರುವ ಬಿಜೆಪಿ ನಾಯಕರು ಸ್ವಾಭಿಮಾನ, ಆತ್ಮಗೌರವವನ್ನು ಬೀದಿಪಾಲು ಮಾಡಿಕೊಂಡಿದ್ದು ಕರುಣಾಜನಕವಾಗಿದೆ. ಹೈಕಮಾಂಡ್ನಿಂದ ಇಷ್ಟೊಂದು ತಿರಸ್ಕಾರಕ್ಕೆ ಒಳಪಟ್ಟಿರುವಾಗ “ವಿರೋಧ ಪಕ್ಷದ ನಾಯಕ”ನ ಆಯ್ಕೆ ಸಾಧ್ಯವಾಗುವುದೇ? “ಈಗ ಸ್ವತಃ ಬಿಜೆಪಿಗರೂ ಸರ್ವಾಧಿಕಾರದ ಸಂತ್ರಸ್ತರಾಗಿದ್ದಾರೆ” ಬೀದಿಯಲ್ಲಿ ನಿಂತ ಬಿಜೆಪಿ ನಾಯಕರು ತಮ್ಮನ್ನು ತಾವೇ ಅವಮಾನಿಸಿಕೊಂಡಿದ್ದಲ್ಲ, ಇದು ಮತ ನೀಡಿದ ಮತದಾರರಿಗೆ ಅವಮಾನ, ಕನ್ನಡಿಗರಿಗೆ ಅವಮಾನ, ಕಾರ್ಯಕರ್ತರಿಗೆ ಅವಮಾನ ಎಂದು ಪ್ರಿಯಾಂಕ್ ಖರ್ಗೆ ಟ್ವೀಟ್ ಮಾಡುವ ಮೂಲಕ ವ್ಯಂಗ್ಯವಾಡಿದ್ದಾರೆ.
https://twitter.com/PriyankKharge/status/1695314265127940179?ref_src=twsrc%5Etfw%7Ctwcamp%5Etweetembed%7Ctwterm%5E1695314265127940179%7Ctwgr%5Ea870566aba872e1e0223e5aa6f9da7b59ae1417d%7Ctwcon%5Es1_&ref_url=https%3A%2F%2Ftv9kannada.com%2Fkarnataka%2Flive-news-on-karnataka-politics-congress-government-siddaramaiah-mysuru-visit-dk-shivakumar-lok-sabha-polls-chandrayaan-3-isro-ayb-653979.html