ಬೆಳಗಾವಿ: ಕಾಂಗ್ರೆಸ್ ಹಾಗೂ ಬಿಜೆಪಿ ನಾಯಕರು ಒಟ್ಟಿಗೆ ವಿಮಾನದಲ್ಲಿ ಬೆಳಗಾವಿಯಿಂದ ಬೆಂಗಳೂರಿಗೆ ಪ್ರಯಾಣ ಬೆಳೆಸಿದ್ದಾರೆ.
ಬೆಳಗಾವಿಯಲ್ಲಿ ನಡೆದ ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಭೆಗೆ ಆಗಮಿಸಿದ್ದ ಬಿಜೆಪಿ ನಾಯಕರು ಹಾಗೂ ಬಾಗಲಕೋಟೆ ಜಿಲ್ಲೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಭಾಗಿಯಾದ ಕಾಂಗ್ರೆಸ್ ನಾಯಕರು ಬೆಳಗಾವಿಯಿಂದ ಬೆಂಗಳೂರಿಗೆ ಒಟ್ಟಿಗೆ ಪ್ರಯಾಣ ಬೆಳೆಸಿದ್ದಾರೆ.
ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್, ಸಿಎಂ ಯಡಿಯೂರಪ್ಪ, ಡಿಸಿಎಂ ಗೋವಿಂದ ಕಾರಜೋಳ ಮೊದಲಾದ ಬಿಜೆಪಿ ನಾಯಕರು ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮೊದಲಾದ ಕಾಂಗ್ರೆಸ್ ನಾಯಕರು ಒಟ್ಟಿಗೆ ಪ್ರಯಾಣ ಬೆಳೆಸಿದ್ದಾರೆ. ಬೆಳಗಾವಿ ವಿಮಾನ ನಿಲ್ದಾಣದಲ್ಲಿ ಮುಖಾಮುಖಿಯಾದ ನಾಯಕರು ಉಭಯ ಕುಶಲೋಪರಿ ವಿಚಾರಿಸಿ ಅಲ್ಲಿಂದ ಪ್ರಯಾಣ ಬೆಳೆಸಿದ್ದಾರೆನ್ನಲಾಗಿದೆ.