
ಬೆಂಗಳೂರು: ಸಿಎಂ ಯಡಿಯೂರಪ್ಪ ಅವರಿಗೆ ಬಿಜೆಪಿ ಹೈಕಮಾಂಡ್ ಬುಲಾವ್ ನೀಡಿದ್ದು ನಾಳೆ ಬೆಳಗ್ಗೆ ಅವರು ದೆಹಲಿಗೆ ತೆರಳಲಿದ್ದಾರೆ.
ಬೆಳಗ್ಗೆಯೇ ಬೆಂಗಳೂರಿನಿಂದ ಹೊರಡಲಿರುವ ಸಿಎಂ 11 ಗಂಟೆಗೆ ದೆಹಲಿ ತಲುಪಲಿದ್ದಾರೆ. ಸಚಿವ ಸಂಪುಟ ವಿಸ್ತರಣೆ ಸೇರಿದಂತೆ ಹಲವು ವಿಷಯಗಳ ಕುರಿತು ಬಿಜೆಪಿ ವರಿಷ್ಠರೊಂದಿಗೆ ಚರ್ಚಿಸುವ ಸಾಧ್ಯತೆಯಿದೆ ಎನ್ನಲಾಗಿದೆ.
ಇನ್ನು ರಾಜ್ಯಕ್ಕೆ ಜನವರಿ 15, 16 ರಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಭೇಟಿ ನೀಡಲಿದ್ದಾರೆ. ಸಂಕ್ರಾಂತಿಯೊಳಗೆ ಸಚಿವ ಸಂಪುಟ ವಿಸ್ತರಣೆ ಮಾಡುವ ಕುರಿತು ನಾಳೆ ಸಿಎಂ ದೆಹಲಿಯಲ್ಲಿ ವರಿಷ್ಠರೊಂದಿಗೆ ಚರ್ಚೆ ನಡೆಸಲಿದ್ದಾರೆ ಎಂದು ಹೇಳಲಾಗಿದೆ.