alex Certify BIG NEWS: ನಾಳೆಯೇ ದೆಹಲಿಗೆ ಬನ್ನಿ: ರಾಜ್ಯದ ಮೂವರು ಬಿಜೆಪಿ ನಾಯಕರಿಗೆ ಹೈಕಮಾಂಡ್ ಬುಲಾವ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ನಾಳೆಯೇ ದೆಹಲಿಗೆ ಬನ್ನಿ: ರಾಜ್ಯದ ಮೂವರು ಬಿಜೆಪಿ ನಾಯಕರಿಗೆ ಹೈಕಮಾಂಡ್ ಬುಲಾವ್

ಬೆಂಗಳೂರು: ರಾಜ್ಯದ ಮೂವರು ಬಿಜೆಪಿ ನಾಯಕರಿಗೆ ಹೈಕಮಾಂಡ್ ಬುಲಾವ್ ನೀಡಿದೆ. ಮಾಜಿ ಡಿಸಿಎಂ ಕೆ.ಎಸ್. ಈಶ್ವರಪ್ಪ, ವಿಧಾನ ಪರಿಷತ್ ಸದಸ್ಯ ಕೋಟಾ ಶ್ರೀನಿವಾಸ್ ಪೂಜಾರಿ, ಸಂಸದ ಪಿ.ಸಿ. ಮೋಹನ್ ಅವರಿಗೆ ಬಿಜೆಪಿ ಹೈಕಮಾಂಡ್ ಬುಲಾವ್ ನೀಡಿದೆ.

ನಾಳೆ ದೆಹಲಿಗೆ ಬರುವಂತೆ ವರಿಷ್ಠರು ಕರೆ ಮಾಡಿ ಸೂಚನೆ ನೀಡಿದ್ದಾರೆ. ನಾಳೆ ಮಧ್ಯಾಹ್ನ 3:30ಕ್ಕೆ ಬಿಜೆಪಿ ಕಚೇರಿಯಲ್ಲಿ ಭೇಟಿಯಾಗಲು ಸೂಚನೆ ನೀಡಲಾಗಿದೆ.

ಕಳೆದ ವಾರ ಮಾಜಿ ಸಿಎಂ ಡಿ.ವಿ. ಸದಾನಂದಗೌಡ ಅವರಿಗೆ ಹೈಕಮಾಂಡ್ ಬುಲಾವ್ ನೀಡಿತ್ತು. ಆದರೆ, ದೆಹಲಿಗೆ ಹೋದರೂ ಅವರನ್ನು ಭೇಟಿ ಮಾಡದೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಡ್ಡಾ ವಾಪಸ್ ಕಳುಹಿಸಿದ್ದರು.

ರಾಜ್ಯ ಬಿಜೆಪಿ ಅಧ್ಯಕ್ಷ ಸ್ಥಾನ, ವಿಧಾನಸಭೆ ಮತ್ತು ವಿಧಾನ ಪರಿಷತ್ ವಿಪಕ್ಷ ನಾಯಕರ ಆಯ್ಕೆಗೆ ಸಂಬಂಧಿಸಿದಂತೆ ಬಿಜೆಪಿ ನಾಯಕರಿಗೆ ಹೈಕಮಾಂಡ್ ಬುಲಾವ್ ನೀಡಿದೆ ಎನ್ನಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...