
ನವದೆಹಲಿ: ರಾಜ್ಯ ಬಿಜೆಪಿಯಲ್ಲಿ ಮಹಾ ಬದಲಾವಣೆಯಾಗುತ್ತದೆಯೇ ಎನ್ನುವ ಚರ್ಚೆ ನಡೆದಿದೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯ ಭೇಟಿಗೆ ಮುನ್ನ ದೆಹಲಿಯಲ್ಲಿ ಸಂಚಲನ ತರುವ ಬೆಳವಣಿಗೆ ನಡೆದಿದೆ.
ಬಿಜೆಪಿ ಹೈಕಮಾಂಡ್ ನಾಯಕರ ಮಹತ್ವದ ಸಭೆ ದೆಹಲಿಯಲ್ಲಿ ನಡೆದಿದೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರ ನಿವಾಸದಲ್ಲಿ ಪಕ್ಷದ ಹಿರಿಯ ನಾಯಕರ ಮಹತ್ವದ ಸಭೆ ನಡೆದಿದ್ದು, ಕೇಂದ್ರ ಗೃಹಸಚಿವ ಅಮಿತ್ ಶಾ, ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಹಾಗೂ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮೊದಲಾದವರು ಭಾಗಿಯಾಗಿದ್ದಾರೆ.
ಬಿಜೆಪಿ ಹೈಕಮಾಂಡ್ ನಾಯಕರ ಸಭೆ ಕುತೂಹಲ ಕೆರಳಿಸಿದೆ. ಒಂದು ಗಂಟೆಗೂ ಅಧಿಕ ಕಾಲ ನಾಯಕರು ಚರ್ಚೆ ನಡೆಸಿದ್ದಾರೆ. ಅಮಿತ್ ಶಾ ಅವರ ರಾಜ್ಯ ಭೇಟಿಗೆ ಮೊದಲು ನಡೆದ ಈ ಸಭೆಯಲ್ಲಿ ಕೈಗೊಂಡ ತೀರ್ಮಾನದಂತೆ ರಾಜ್ಯ ಬಿಜೆಪಿಯಲ್ಲಿ ಮಹತ್ವದ ಬದಲಾವಣೆ ನಡೆಯುವ ಸಾಧ್ಯತೆ ಇದೆ ಎನ್ನಲಾಗಿದೆ.