alex Certify ರಾಜ್ಯ ಬಿಜೆಪಿ ನಾಯಕರಿಗೆ ನಂಬರ್ 40 ಚೆನ್ನಾಗಿ ಒಪ್ಪುತ್ತೆ, ಅಷ್ಟೇ ಸ್ಥಾನ ನೀಡಿ: ರಾಹುಲ್ ಗಾಂಧಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರಾಜ್ಯ ಬಿಜೆಪಿ ನಾಯಕರಿಗೆ ನಂಬರ್ 40 ಚೆನ್ನಾಗಿ ಒಪ್ಪುತ್ತೆ, ಅಷ್ಟೇ ಸ್ಥಾನ ನೀಡಿ: ರಾಹುಲ್ ಗಾಂಧಿ

ಬಳ್ಳಾರಿ: ರಾಜ್ಯ ಬಿಜೆಪಿ ನಾಯಕರಿಗೆ 40 ನಂಬರ್ ಚೆನ್ನಾಗಿ ಒಪ್ಪುತ್ತದೆ. ಬಿಜೆಪಿಗೆ 40 ಸ್ಥಾನ ಮಾತ್ರ ನೀಡಿ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ.

ಬಳ್ಳಾರಿಯ ಕಾಂಗ್ರೆಸ್ ಸಮಾವೇಶದಲ್ಲಿ ಮಾತನಾಡಿದ ರಾಹುಲ್ ಗಾಂಧಿ, ಯಾರು ಗೆಲ್ಲಬೇಕು ಎಂದು ನೀವು ನಿರ್ಣಯ ತೆಗೆದುಕೊಳ್ಳಬೇಕು. ನೀವು ಗೆಲ್ಲಿಸಿದ ಶಾಸಕರನ್ನು ಕಿತ್ತುಕೊಂಡು ಸರ್ಕಾರ ಮಾಡಿದ್ದಾರೆ. ಈ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ 140 -150 ಸ್ಥಾನ ಗೆಲ್ಲಬೇಕು ಎಂದು ಹೇಳಿದ್ದಾರೆ.

ಕಾಂಗ್ರೆಸ್ ಘೋಷಿಸಿರುವ 5 ಗ್ಯಾರಂಟಿಗಳನ್ನು ಜಾರಿ ಮಾಡುತ್ತೇವೆ. ಬಳ್ಳಾರಿಯಲಿ ಜೀನ್ಸ್ ಪಾರ್ಕ್ ಸ್ಥಾಪನೆ ಮಾಡುತ್ತೇವೆ. ಸಾಮಾನ್ಯವಾಗಿ ಭರವಸೆ ನೀಡಲ್ಲ. ನೀಡಿದ್ರೆ ಮಾಡಿ ತೋರಿಸುವೆ. ಪ್ರಧಾನಿ ಮೋದಿ ಅವರ ರೀತಿ ನಾನು ಸುಳ್ಳು ಆಶ್ವಾಸನೆ ನೀಡುವುದಿಲ್ಲ. ನಾವು ಅಧಿಕಾರದಲ್ಲಿದ್ದಾಗ 371ಜೆ ಜಾರಿ ಮಾಡಿದ್ದೇವೆ. ಬಿಜೆಪಿ ಸರ್ಕಾರ ಕಲ್ಯಾಣ ಕರ್ನಾಟಕದಲ್ಲಿ ಬೋರ್ಡ್ ಸಹ ಸ್ಥಾಪಿಸಲಿಲ್ಲ ಎಂದು ದೂರಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...