ನವದೆಹಲಿ: ರಾಷ್ಟ್ರಪತಿ ಚುನಾವಣೆಗೆ ಬಿಜೆಪಿ ನೇತೃತ್ವದ ಎನ್.ಡಿ.ಎ. ಅಭ್ಯರ್ಥಿಯಾಗಿ ದ್ರೌಪದಿ ಮುರ್ಮು ಅವರನ್ನು ಹೆಸರಿಸಿದೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಘೋಷಿಸಿದ್ದಾರೆ.
ವಿಪಕ್ಷಗಳ ಮೈತ್ರಿಕೂಟ ಯಶವಂತ್ ಸಿನ್ಹಾ ಅವರನ್ನು ಅಭ್ಯರ್ಥಿಯಾಗಿ ಆಯ್ಕೆ ಮಾಡಿದ್ದು, ಇದರ ಬೆನ್ನಲ್ಲೇ ಎನ್ಡಿಎ ಮೈತ್ರಿಕೂಟದಿಂದ ದ್ರೌಪದಿ ಮುರ್ಮು ಅವರನ್ನು ರಾಷ್ಟ್ರಪತಿ ಚುನಾವಣೆಗೆ ಅಭ್ಯರ್ಥಿಯಾಗಿ ಘೋಷಿಸಲಾಗಿದೆ.
ಆದಿವಾಸಿ ಮಹಿಳೆಯಾಗಿರುವ ದ್ರೌಪದಿ ಅವರು ಎನ್.ಡಿ.ಎ. ಕಡೆಯಿಂದ ರಾಷ್ಟ್ರಪತಿ ಅಭ್ಯರ್ಥಿಯಾಗಿದ್ದಾರೆ. ಪ್ರಥಮ ಬಾರಿಗೆ ಬುಡಕಟ್ಟು ಮಹಿಳಾ ಅಭ್ಯರ್ಥಿಗೆ ಆದ್ಯತೆ ನೀಡಲಾಗಿದೆ. ಮುಂಬರುವ ರಾಷ್ಟ್ರಪತಿ ಚುನಾವಣೆಗೆ ದ್ರೌಪದಿ ಮುರ್ಮು ಅವರನ್ನು ಎನ್ಡಿಎ ಅಭ್ಯರ್ಥಿಯನ್ನಾಗಿ ಘೋಷಿಸಲಾಗಿದೆ.
ದ್ರೌಪದಿ ಮುರ್ಮು ಶಿಕ್ಷಕಿಯಾಗಿ ಕೆಲಸ ಮಾಡಿದ್ದಾರೆ. ಕೌನ್ಸಿಲರ್ ಆದ ನಂತರ ಶಾಸಕಿಯಾದರು. ಸರ್ವೆಪಲ್ಲಿ ರಾಧಾಕೃಷ್ಣನ್ ಅವರಂತೆ ದ್ರೌಪದಿ ಮುರ್ಮು ಅವರು ಶಿಕ್ಷಣ ಕ್ಷೇತ್ರದೊಂದಿಗೆ ಬಹಳ ಕಾಲ ನಂಟು ಹೊಂದಿದ್ದು, ಸುದೀರ್ಘ ಕಾಲ ಶಾಸಕರಾಗಿ, ಸಚಿವರಾಗಿ ಸೇವೆ ಸಲ್ಲಿಸಿದ್ದಾರೆ. ಅವರು ಒಡಿಶಾ ಸರ್ಕಾರದ ಸಾರಿಗೆ ಮತ್ತು ವಾಣಿಜ್ಯ ಖಾತೆಗಳನ್ನು ನಿರ್ವಹಿಸಿದ್ದಾರೆ. 2007 ರಲ್ಲಿ ಶಾಸಕರಾಗಿ ನೀಲಕಂಠ ಪ್ರಶಸ್ತಿಯನ್ನು ಪಡೆದಿದ್ದಾರೆ.