ತುಮಕೂರು: ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಪಕ್ಷದಿಂದ ಉಚ್ಛಾಟಿಸುವಂತೆ ಈವರೆಗೆ ಬಿಜೆಪಿ ಕಾರ್ಯಕರ್ತರು ಆಗ್ರಹಿಸುತ್ತಿದ್ದರು. ಇದೀಗ ಪಕ್ಷದ ನಾಯಕರೂ ಯತ್ನಾಳ್ ಉಚ್ಛಾಟನೆಗೆ ಪಟ್ಟು ಹಿಡಿದಿರುವ ಘಟನೆ ನಡೆದಿದೆ.
ಬಿಜೆಪಿ ನಾಯಕ, ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ನೇತೃತ್ವದಲ್ಲಿ ಬಿಜೆಪಿ ಮುಖಂಡರು ಯತ್ನಾಳ್ ಉಚ್ಛಾಟನೆಗೆ ಒತ್ತಾಯಿಸಿ ತುಮಕೂರಿನಲ್ಲಿ ಪ್ರತಿಭಟನೆ ನಡೆಸಿದ್ದಾರೆ.
ತುಮಕೂರಿನ ಕುಣಿಗಲ್ ಬಳಿಯ ಯಡಿಯೂರು ಸಿದ್ದಲಿಂಗೇಶ್ವರ ದೇಗುಲದ ಮುಂದೆ ಬಿಜೆಪಿ ನಾಯಕರು ಪ್ರತಿಭಟನೆ ನಡೆಸಿದ್ದು, ಯತ್ನಾಳ್ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಯತ್ನಾಳ್ ಅವರನ್ನು ಪಕ್ಷದಿಂದ ಉಚ್ಛಾಟನೆ ಮಾಡಿ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.