alex Certify ಮಂಡ್ಯದಲ್ಲಿ ರಾಜಕೀಯ ನೆಲೆ ಕಂಡುಕೊಳ್ಳಲು ಜನರ ಎತ್ತಿ ಕಟ್ಟುತ್ತಿರುವ ಬಿಜೆಪಿ: ಡಿಸಿಎಂ ಡಿಕೆಶಿ ಆರೋಪ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮಂಡ್ಯದಲ್ಲಿ ರಾಜಕೀಯ ನೆಲೆ ಕಂಡುಕೊಳ್ಳಲು ಜನರ ಎತ್ತಿ ಕಟ್ಟುತ್ತಿರುವ ಬಿಜೆಪಿ: ಡಿಸಿಎಂ ಡಿಕೆಶಿ ಆರೋಪ

ಬೆಂಗಳೂರು: ಮಂಡ್ಯದಲ್ಲಿ ರಾಜಕೀಯ ನೆಲೆ ಕಂಡುಕೊಳ್ಳಲು ಬಿಜೆಪಿ ಜನರನ್ನು ಎತ್ತಿ ಕಟ್ಟುತ್ತಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆರೋಪಿಸಿದ್ದಾರೆ.

ಸಮಾಜದಲ್ಲಿ ಅಶಾಂತಿ ಸೃಷ್ಟಿಸಲು ಬಿಜೆಪಿ ಮುಖಂಡರು ಪ್ರಯತ್ನ ನಡೆಸಿದ್ದಾರೆ. ಕಾನೂನಿಗೆ ನಾವು ಗೌರವಿಸಬೇಕು. ಬಿಜೆಪಿ ಅಭ್ಯರ್ಥಿಗಳು ಹಲವೆಡೆ ಠೇವಣಿ ಕಳೆದುಕೊಂಡ ಹಿನ್ನೆಲೆಯಲ್ಲಿ ಜೆಡಿಎಸ್ ನೊಂದಿಗೆ ಸೇರಿಕೊಂಡಿದ್ದಾರೆ. ಮಂಡ್ಯದಲ್ಲಿ ರಾಜಕೀಯ ನೆಲೆ ಕಂಡುಕೊಳ್ಳುವ ಉದ್ದೇಶದಿಂದ ಜನರನ್ನು ಎತ್ತಿ ಕಟ್ಟಲು ಪ್ರಯತ್ನಿಸಿದ್ದಾರೆ ಎಂದು ಹೇಳಿದ್ದಾರೆ.

ಮಂಡ್ಯ ಜನ ಸಹಿಷ್ಣುತೆ, ಜಾತ್ಯತೀತತೆ ಹೊಂದಿದವರಾಗಿದ್ದಾರೆ. ಇಂತಹ ವಿಚಾರಗಳಿಗೆ ಅವರು ಮರುಳಾಗುವುದಿಲ್ಲ. ಎಲ್ಲಾ ಗೊಂದಲಗಳಿಗೆ ಬಿಜೆಪಿ ಕಾರಣ. ರಾಜ್ಯದಲ್ಲಿ ಶಾಂತಿ ಸ್ಥಾಪಿಸುವುದು ನಮ್ಮ ಆದ್ಯತೆಯಾಗಿದೆ ಎಂದು ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...