BIG NEWS: ಅವಧಿಗೆ ಮೊದಲೇ ಡಿಸೆಂಬರ್ ನಲ್ಲಿ ಲೋಕಸಭೆ ಚುನಾವಣೆ: ಈಗಲೇ ಬಿಜೆಪಿಯಿಂದ ಹೆಲಿಕಾಪ್ಟರ್ ಬುಕ್; ಮಮತಾ ಬ್ಯಾನರ್ಜಿ

ನವದೆಹಲಿ: ಡಿಸೆಂಬರ್ ಅಥವಾ ಜನವರಿಯಲ್ಲಿ ಬಿಜೆಪಿ ಲೋಕಸಭೆ ಚುನಾವಣೆಯನ್ನು ನಡೆಸಬಹುದು ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಹೇಳಿದ್ದು, ಪ್ರಚಾರಕ್ಕಾಗಿ ಕೇಸರಿ ಪಕ್ಷದಿಂದ ಎಲ್ಲಾ ಹೆಲಿಕಾಪ್ಟರ್‌ಗಳನ್ನು ಕಾಯ್ದಿರಿಸಲಾಗಿದೆ ಎಂದು ತಿಳಿಸಿದ್ದಾರೆ.

ಲೋಕಸಭೆ ಚುನಾವಣೆಗೆ ಮತದಾನವು ಈ ವರ್ಷ ಡಿಸೆಂಬರ್ ಅಥವಾ ಮುಂದಿನ ವರ್ಷ ಜನವರಿಗೆ ನಡೆಯಬಹುದು ಎಂಬ ಆತಂಕ ನನಗಿದೆ. ಬಿಜೆಪಿಗೆ ಎಲ್ಲವೂ ಸಾಧ್ಯ ಎಂದು ಮಮತಾ ಬ್ಯಾನರ್ಜಿ ಹೇಳಿದ್ದಾರೆ.

ಟಿಎಂಸಿ ವಿದ್ಯಾರ್ಥಿ ಸಂಘಟನೆಯ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಮಮತಾ ಬ್ಯಾನರ್ಜಿ, ಬಿಜೆಪಿ ಮೂರನೇ ಬಾರಿಗೆ ಅಧಿಕಾರಕ್ಕೆ ಬಂದರೆ ಇಡೀ ದೇಶ ಸಂಪೂರ್ಣ ನಿರಂಕುಶ ಪ್ರಭುತ್ವದತ್ತ ಸಾಗಲಿದೆ ಎಂದು ದೂರಿದ್ದಾರೆ.

ಲೋಕಸಭೆ ಚುನಾವಣೆಯಲ್ಲಿ ಪ್ರಚಾರ ಮಾಡಲು ಬಿಜೆಪಿ ಈಗಾಗಲೇ ಎಲ್ಲಾ ಹೆಲಿಕಾಪ್ಟರ್‌ಗಳನ್ನು ಕಾಯ್ದಿರಿಸಿದೆ ಯಾವುದೇ ರಾಜಕೀಯ ಪಕ್ಷಗಳು ಪ್ರಚಾರಕ್ಕಾಗಿ ಅವುಗಳನ್ನು ಬಳಸಬಾರದು ಎಂಬ ದುರುದ್ದೇಶ ಇದರ ಹಿಂದಿದೆ ಎಂದು ಆರೋಪಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read