
ಬೆಂಗಳೂರು: ನಾಳೆ ಬೆಂಗಳೂರಿನಲ್ಲಿ ನಿಗದಿಯಾಗಿದ್ದ ಬಿಜೆಪಿ ಶಾಸಕಾಂಗ ಸಭೆ ರದ್ದಾಗಿದೆ. ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ನಾಳೆ ದೆಹಲಿಗೆ ತೆರಳಿದ್ದಾರೆ.
ನಾಳೆ ದೆಹಲಿಯಲ್ಲಿ ನಡೆಯಲಿರುವ ಬಿಜೆಪಿ ಸಭೆಯಲ್ಲಿ ಬಿ.ಎಸ್.ವೈ. ಭಾಗವಹಿಸಲಿದ್ದಾರೆ. ಮಧ್ಯಾಹ್ನ 3 ಗಂಟೆಗೆ ಬಿಜೆಪಿ ಸಭೆ ನಡೆಯಲಿದ್ದು, ನಾಳೆ ದೆಹಲಿಯಲ್ಲಿಯೇ ವಿಧಾನಸಭೆ ಮತ್ತು ವಿಧಾನ ಪರಿಷತ್ ವಿಪಕ್ಷ ನಾಯಕರು, ಮುಖ್ಯ ಸಚೇತಕರ ಹೆಸರು ಘೋಷಣೆ ಮಾಡುವ ನಿರೀಕ್ಷೆ ಇದೆ.