alex Certify BIG NEWS: ಬಿಜೆಪಿಯಲ್ಲಿ ಮತ್ತಷ್ಟು ತೀವ್ರಗೊಂಡ ವಿಜಯೇಂದ್ರ ಹಠಾವೋ ಹೋರಾಟ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಬಿಜೆಪಿಯಲ್ಲಿ ಮತ್ತಷ್ಟು ತೀವ್ರಗೊಂಡ ವಿಜಯೇಂದ್ರ ಹಠಾವೋ ಹೋರಾಟ

ದಾವಣಗೆರೆ: ಬಿಜೆಪಿಯಲ್ಲಿ ವಿಜಯೇಂದ್ರ ಹಠಾವೋ ಹೋರಾಟ ಹೆಚ್ಚಾಗಿದ್ದು, ಇಂದು ದಾವಣಗೆರೆಯಲ್ಲಿ ಪಕ್ಷದ ನಾಯಕರ ಮಹತ್ವದ ಸಭೆ ನಡೆಯಲಿದೆ.

ದಾವಣಗೆರೆಯ ಜಿಎಂಐಟಿ ಕಾಲೇಜು ಅತಿಥಿ ಗೃಹದಲ್ಲಿ ಬಿಜೆಪಿ ಶಾಸಕರಾದ ಬಸನಗೌಡ ಪಾಟೀಲ್ ಯತ್ನಾಳ್, ರಮೇಶ್ ಜಾರಕಿಹೊಳಿ ನೇತೃತ್ವದಲ್ಲಿ, ದಾವಣಗೆರೆಯ ಮಾಜಿ ಸಂಸದ ಜಿ.ಎಂ. ಸಿದ್ದೇಶ್ವರ ಅಧ್ಯಕ್ಷತೆಯಲ್ಲಿ ಸಭೆ ನಡೆಯಲಿದೆ.

ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರ ಆಪ್ತರಾಗಿದ್ದ ಸಿದ್ದೇಶ್ವರ ಅಧ್ಯಕ್ಷತೆಯದಲ್ಲಿ ಸಭೆ ನಡೆಯುತ್ತಿರುವುದು ಕುತೂಹಲ ಮೂಡಿಸಿದೆ. ಸಭೆಯಲ್ಲಿ ಹಲವು ಶಾಸಕರು, ಮಾಜಿ ಶಾಸಕರು. ನಾಯಕರು ಭಾಗವಹಿಸಲಿದ್ದಾರೆ. ಸಭೆಯ ನಂತರ ಸುದ್ದಿಗೋಷ್ಠಿ ನಡೆಸುವ ಸಾಧ್ಯತೆ ಇದೆ.

ವಿಜಯೇಂದ್ರ ನಾಯಕತ್ವ ಒಪ್ಪಲ್ಲ ಎಂದು ಬಹಿರಂಗವಾಗಿಯೇ ಹೇಳಿರುವ ರಮೇಶ್ ಜಾರಕಿಹೊಳಿ ಸೇರಿ ಹಲವು ಪ್ರಮುಖರು ಈಗಾಗಲೇ ಅನೇಕ ಬಾರಿ ಪ್ರತ್ಯೇಕ ಸಭೆ ನಡೆಸಿದ್ದಾರೆ. ಇಂದು ದಾವಣಗೆರೆಯಲ್ಲಿ ನಡೆಯುವ ಸಭೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರ ಬದಲಾವಣೆ ಬಗ್ಗೆ ಚರ್ಚಿಸಲಿದ್ದಾರೆ ಎನ್ನಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...