
ದೆಹಲಿಯಲ್ಲಿ ಸೋಮವಾರ ಮತ್ತು ಮಂಗಳವಾರ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಣಿ ನಡೆಯಲಿದೆ. ಈ ಸಭೆಯಲ್ಲಿ ಭಾಗವಹಿಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹಾಗೂ ಹಲವು ನಾಯಕರು ದೆಹಲಿಗೆ ತೆರಳಲಿದ್ದಾರೆ.
ರಾಷ್ಟ್ರೀಯ ಕಾರ್ಯಕಾರಿಣಿಯಲ್ಲಿ ರಾಜ್ಯ ವಿಧಾನಸಭೆ ಚುನಾವಣೆ ಸಿದ್ಧತೆ ಬಗ್ಗೆ ಚರ್ಚೆ ನಡೆಸಲಾಗುವುದು. ಅಲ್ಲದೇ ಸಚಿವ ಸಂಪುಟ ವಿಸ್ತರಣೆ ಬಗ್ಗೆಯೂ ಚರ್ಚೆ ನಡೆಯುವ ಸಾಧ್ಯತೆ ಇದೆ.
ಎರಡು ದಿನಗಳ ಕಾಲ ನಡೆಯುವ ಕಾರ್ಯಕಾರಿಣಿಯಲ್ಲಿ ಪಕ್ಷದ ಅಧ್ಯಕ್ಷ ಜೆ.ಪಿ. ನಡ್ಡಾ ಅವರ ಅವಧಿಯನ್ನು ವಿಸ್ತರಿಸಲು ಸಭೆಯಲ್ಲಿ ಅನುಮೋದನೆ ನೀಡಲಾಗುವುದು. ಕರ್ನಾಟಕ ಸೇರಿದಂತೆ ಈ ವರ್ಷ 9 ರಾಜ್ಯಗಳಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದ್ದು, ಈ ಬಗ್ಗೆ ಚರ್ಚೆ ನಡೆಸಲಾಗುವುದು. ಪಕ್ಷ ಸಂಘಟನೆಯಲ್ಲಿ ಬದಲಾವಣೆ, ಲೋಕಸಭೆ ಚುನಾವಣೆ ಗೆಲುವಿಗೆ ಕೈಗೊಳ್ಳಬೇಕಿರುವ ಕ್ರಮಗಳ ಕುರಿತು ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು.