ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು ಮತ್ತು ನಾಳೆ ಹೈದರಾಬಾದ್ ಪ್ರವಾಸ ಕೈಗೊಂಡಿದ್ದಾರೆ.
ಹೈದರಾಬಾದ್ ನಲ್ಲಿ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ ನಡೆಯಲಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬೊಮ್ಮಾಯಿ ಎರಡು ದಿನ ಹೈದರಾಬಾದ್ ಪ್ರವಾಸ ಕೈಗೊಂಡಿದ್ದಾರೆ. ಇಂದು ಬೆಳಗ್ಗೆ 8:55 ಕ್ಕೆ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಪ್ರಯಾಣ ಬೆಳೆಸಲಿದ್ದಾರೆ.
ಎರಡು ದಿನ ಕಾರ್ಯಕಾರಣಿ ಸಭೆಯಲ್ಲಿ ಅವರು ಭಾಗಿಯಾಗಲಿದ್ದು, ನಾಳೆ ಸಂಜೆ ಹೈದರಾಬಾದ್ ನಿಂದ ಬೆಂಗಳೂರಿಗೆ ವಾಪಸಾಗಲಿದ್ದಾರೆ. ಬಿಜೆಪಿ ಅಧ್ಯಕ್ಷ ಜೆ.ಪಿ. ನಡ್ಡಾ, ಕೇಂದ್ರ ಗೃಹ ಸಚಿವ ಅಮಿತ್ ಶಾ ಸೇರಿದಂತೆ ಬಿಜೆಪಿಯ ಹಲವು ನಾಯಕರು ಕಾರ್ಯಕಾರಿಣಿ ಸಭೆಯಲ್ಲಿ ಭಾಗಿಯಾಗಲಿದ್ದಾರೆ.