alex Certify ಸರ್ಕಾರ, ಪಕ್ಷ ಸಂಘಟನೆಯಲ್ಲಿ ಬದಲಾವಣೆಗೆ ಬಿಜೆಪಿ ಹೈ ವೋಲ್ಟೇಜ್ ಮೀಟಿಂಗ್: RSS ನಾಯಕರು ಸೇರಿ ಹಲವು ಗಣ್ಯರು ಭಾಗಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸರ್ಕಾರ, ಪಕ್ಷ ಸಂಘಟನೆಯಲ್ಲಿ ಬದಲಾವಣೆಗೆ ಬಿಜೆಪಿ ಹೈ ವೋಲ್ಟೇಜ್ ಮೀಟಿಂಗ್: RSS ನಾಯಕರು ಸೇರಿ ಹಲವು ಗಣ್ಯರು ಭಾಗಿ

ಬೆಂಗಳೂರು: ಬೆಂಗಳೂರು ಹೊರವಲಯದ ದೇವನಹಳ್ಳಿ ನಂದಿಬೆಟ್ಟದ ಬಳಿ ಇರುವ ರೆಸಾರ್ಟ್ ನಲ್ಲಿ ರಾಜ್ಯ ಬಿಜೆಪಿಯ ಮಹತ್ವದ ಸಭೆ ನಡೆಯಲಿದೆ.

ಮುಂದಿನ ವಿಧಾನಸಭೆ ಚುನಾವಣೆ ಗುರಿಯಾಗಿಸಿಕೊಂಡು ನಡೆಯಲಿರುವ ಸಭೆಯಲ್ಲಿ ಪಕ್ಷ ಸಂಘಟನೆ ಬಲಗೊಳಿಸುವುದು ಮತ್ತು ಬದಲಾವಣೆ ಹಾಗೂ ರಾಜ್ಯ ಸರ್ಕಾರದ ವರ್ಚಸ್ಸು ಹೆಚ್ಚಳದ ಕುರಿತಾಗಿ ಮಹತ್ವದ ಚರ್ಚೆ ನಡೆಯಲಿದೆ.

ಈ ಸಭೆಯಲ್ಲಿ ಆರ್.ಎಸ್.ಎಸ್. ನಾಯಕರು, ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಪಕ್ಷದ ರಾಜ್ಯ ಉಸ್ತುವಾರಿ ಅರುಣ್ ಸಿಂಗ್. ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್. ಯಡಿಯೂರಪ್ಪ, ಜಗದೀಶ್ ಶೆಟ್ಟರ್, ಡಿ.ವಿ. ಸದಾನಂದ ಗೌಡ ಮೊದಲಾದವರು ಭಾಗಿಯಾಗಲಿದ್ದಾರೆ.

ಸರ್ಕಾರ, ಪಕ್ಷ ಮತ್ತು ಸಂಘ ಪರಿವಾರದ ಪ್ರಮುಖರು ಭಾಗವಹಿಸಲಿರುವ ಸಭೆಯಲ್ಲಿ ಪಕ್ಷದ ಸಂಘಟನೆ ಮತ್ತು ಸರ್ಕಾರದಲ್ಲಿ ಸಣ್ಣಪುಟ್ಟ ಬದಲಾವಣೆ ಮಾಡುವ ಕುರಿತಾಗಿ ಚರ್ಚೆ ನಡೆಯಲಿದೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...