ಬೆಂಗಳೂರು : ರಾಜ್ಯದ ಸರ್ಕಾರ ಶಾಲಾ ಪಠ್ಯಪುಸ್ತಕ ಪರಿಷ್ಕರಣೆ ಮಾಡಿರುವ ಹಿನ್ನೆಲೆ ಬಿಜೆಪಿ ಕೆರಳಿದ್ದು, ಬಿಜೆಪಿ ಮಹತ್ವದ ಸಭೆ ನಡೆಸುತ್ತಿದೆ.
ಬೆಂಗಳೂರಿನ ಮಲ್ಲೇಶ್ವರಂನಲ್ಲಿ ಬಿಜೆಪಿ ಶಾಸಕರು, ಪರಿಷತ್ ಸದಸ್ಯರು ಸಭೆ ನಡೆಸುತ್ತಿದ್ದಾರೆ. ಸದನದಲ್ಲಿ ಪಠ್ಯಪುಸ್ತಕ ಪರಿಷ್ಕರಣೆ ವಿಚಾರ ಪ್ರಸ್ತಾಪಿಸುವ ಬಗ್ಗೆ ಚರ್ಚೆ ನಡೆಸುತ್ತಿದ್ದಾರೆ. ಸದನದಲ್ಲಿ ಈ ವಿಚಾರ ಪ್ರಸ್ತಾಪವಾಗಲಿದೆ.
ಮುಂದಿನ ಶೈಕ್ಷಣಿಕ ವರ್ಷದಲ್ಲಿ ರಾಜ್ಯ ಶಾಲಾ ಮಕ್ಕಳ ಪಠ್ಯಪುಸ್ತಕ ಪರಿಷ್ಕರಣೆ ಮಾಡುತ್ತೇವೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ. ಪಠ್ಯ ಪುಸ್ತಕದಲ್ಲಿ ಧಾರ್ಮಿಕತೆ ಹಾಗೂ ರಾಜಕೀಯ ಇರಬಾರದು. ಪಠ್ಯದಲ್ಲಿನ ಐಡಿಯಾಲಜಿ ಎಲ್ಲವನ್ನೂ ನಾವು ತೆಗೆದು ಹಾಕಿದ್ದೇವೆ. ಮುಂದಿನ ಶೈಕ್ಷಣಿಕ ವರ್ಷವೂ ನಾವು ಪಠ್ಯಪುಸ್ತಕ ಪರಿಷ್ಕರಣೆ ಮಾಡುತ್ತೇವೆ. ಪಠ್ಯದಲ್ಲಿ ಅನೇಕ ಬದಲಾವಣೆ ಮಾಡುತ್ತೇವೆ.ಶಾಲೆಗಳಲ್ಲಿ ಮಕ್ಕಳಿಗೆ ವಾರದಲ್ಲಿ 2 ದಿನ ಮೊಟ್ಟೆ ಕೊಡುವ ಬಗ್ಗೆ ಸಿಎಂ ಸಿದ್ದರಾಮಯ್ಯ ಬಳಿ ಮನವಿ ಮಾಡಿಕೊಂಡಿದ್ದೆ. ನನ್ನ ಮನವಿಯನ್ನು ಅನುಮೋದಿಸಿದ ಸಿದ್ದರಾಮಯ್ಯ ಅವರು, ವಾರದಲ್ಲಿ 2 ದಿನ ಮಕ್ಕಳಿಗೆ ಮೊಟ್ಟೆ ನೀಡಲು ಅನುಮೋದನೆ ನೀಡಿದ್ದಾರೆ.