
ಬೆಳಗಾವಿ: ಬಿಜೆಪಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಆಪ್ತ ಸಹಾಯಕ ನಾಗಪ್ಪ ಶೇಖರಗೋಳ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ.
ನಾಗಪ್ಪ ಶೇಖರಗೋಳ ಬೆಳಗಾವಿ ಜಿಲ್ಲೆಯ ಅರಭಾವಿ ಕ್ಷೇತ್ರದ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಆಪ್ತ ಸಹಾಯಕರಾಗಿದ್ದರು. ಇದ್ದಕ್ಕಿದ್ದಂತೆ ಹೃದಯಾಘಾತವಾಗಿ ಮೃತಪಟ್ಟಿದ್ದಾರೆ.
ನಾಗಪ್ಪ ಶೇಖರಗೋಳ ಅವರ ಅಂತ್ಯಕ್ರಿಯೆ ಇಂದು ಸಂಜೆ ಬೆಳಗಾವಿ ಜಿಲ್ಲೆ ಗೋಕಾಕ್ ತಾಲೂಕಿನ ಕುಂಬಾರಗಲ್ಲಿಯಲ್ಲಿ ನಡೆಯಲಿದೆ ಎಂದು ತಿಳಿದುಬಂದಿದೆ.