alex Certify BREAKING NEWS: ಬಿಜೆಪಿ ಶಾಸಕ ಬಸವರಾಜ್ ಮತ್ತಿಮೂಡ್ ಕಾರು ಅಪಘಾತ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ಬಿಜೆಪಿ ಶಾಸಕ ಬಸವರಾಜ್ ಮತ್ತಿಮೂಡ್ ಕಾರು ಅಪಘಾತ

ಕಲಬುರ್ಗಿ: ಬಿಜೆಪಿ ಶಾಸಕ ಬಸವರಾಜ್ ಮತ್ತಿಮೂಡ್ ಪ್ರಯಾಣಿಸುತ್ತಿದ್ದ ಕಾರು ಅಪಘಾತಕ್ಕೀಡಾಗಿರುವ ಘಟನೆ ಕಲಬುರ್ಗಿಯಲ್ಲಿ ನಡೆದಿದೆ.

ಕಲಬುರ್ಗಿ ಗ್ರಾಮೀಣ ಕ್ಷೇತ್ರದ ಬಿಜೆಪಿ ಶಾಸಕ ಬಸವರಾಜ್ ಮತ್ತಿಮೂಡ್ ಪ್ರಯಾಣಿಸುತ್ತಿದ್ದ ಸ್ಕಾರ್ಪಿಯೋ ಕಾರು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿ ಬಿದ್ದಿದ್ದು, ಅಪಘಾತದಲ್ಲಿ ಶಾಸಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ.

ಗಾಯಾಳು ಶಾಸಕರನ್ನು ಕಲಬುರ್ಗಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...