
ಬೆಂಗಳೂರು: ಲಂಚ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ದಾವಣಗೆರೆ ಜಿಲ್ಲೆ ಚನ್ನಗಿರಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಮತ್ತು ಪುತ್ರ ಪ್ರಶಾಂತ್ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಮಾಡಾಳ್ ವಿರೂಪಾಕ್ಷಪ್ಪ ಮತ್ತು ಅವರ ಪುತ್ರ ಪ್ರಶಾಂತ್ ಸಿವಿಲ್ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ. ಲೋಕಾಯುಕ್ತ ಕೇಸ್ ನಡುವೆಯೂ ಮಾಡಾಳ್ ಮತ್ತು ಅವರ ಪುತ್ರ ಪ್ರಶಾಂತ್ ಕೋರ್ಟ್ ಮೊರೆ ಹೋಗಿದ್ದು, ಮಾಧ್ಯಮಗಳ ವಿರುದ್ಧ ನಿರ್ಬಂಧ ಕೋರಿದ್ದಾರೆ. ಮಾನಹಾನಿಕರ ಸುದ್ದಿ ಪ್ರಕಟಣೆ, ಪ್ರಸಾರ ಮಾಡದಂತೆ ನಿರ್ಬಂಧ ಹೇರಲು ಮನವಿ ಮಾಡಿದ್ದಾರೆ. ಬೆಂಗಳೂರಿನ ಸಿವಿಲ್ ಕೋರ್ಟ್ ವಿಚಾರಣೆಯನ್ನು ಮಾರ್ಚ್ 6 ಕ್ಕೆ ಮುಂದೂಡಿದೆ.