ಬೆಂಗಳೂರು: ಶಾಸಕ ಮುನಿರತ್ನ ವಿರುದ್ಧ ಜೀವ ಬೆದರಿಕೆ, ಜಾತಿ ನಿಂದನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿಯಿಂದ ಶೋಕಾಸ್ ನೋಟಿಸ್ ಜಾರಿ ಮಾಡಲಾಗಿದೆ.
ಈ ಮೂಲಕ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ವಶಕ್ಕೆ ಪಡೆದ ಬೆನ್ನಲ್ಲೇ ಮುನಿರತ್ನಗೆ ಮತ್ತೊಂದು ಶಾಕ್ ಎದುರಾಗಿದೆ.
ಬಿಜೆಪಿ ರಾಜ್ಯ ಶಿಸ್ತು ಸಮಿತಿಯಿಂದ ಮುನಿರತ್ನ ಅವರಿಗೆ ಶೋಕಾಸ್ ನೋಟಿಸ್ ನೀಡಲಾಗಿದೆ. ಜಾತಿ ನಿಂದನೆ ಆಡಿಯೋ ಪ್ರಕರಣ ಪಕ್ಷದ ಶಿಸ್ತಿಗೆ ಧಕ್ಕೆ ಉಂಟು ಮಾಡಿದೆ. ಹೀಗಾಗಿ ಐದು ದಿನದಲ್ಲಿ ಶಿಸ್ತು ಸಮಿತಿಯ ಮುಂದೆ ಸ್ಪಷ್ಟೀಕರಣ ನೀಡುವಂತೆ ಮುನಿರತ್ನ ಅವರಿಗೆ ಬಿಜೆಪಿ ಶಿಸ್ತು ಸಮಿತಿ ಶೋಕಾಸ್ ನೀಡಿದೆ.