
ಗದಗ: ಗದಗ ಜಿಲ್ಲೆಯ ಶಿರಹಟ್ಟಿ ಕ್ಷೇತ್ರದಲ್ಲಿ ಬಿಜೆಪಿಗೆ ಬಂಡಾಯದ ಬಿಸಿ ತಟ್ಟಿದೆ. ಬಿಜೆಪಿಯ ಹಾಲಿ ಶಾಸಕ ರಾಮಣ್ಣ ಲಮಾಣಿ ಅವರ ವಿರುದ್ಧ ಬಂಡಾಯ ಸಾರಲಾಗಿದೆ.
ನಾಳೆ ಲಕ್ಷ್ಮೇಶ್ವರ ಪಟ್ಟಣದಲ್ಲಿ ಮುಖಂಡರು ಮತ್ತು ಕಾರ್ಯಕರ್ತರ ಸಭೆ ಕರೆಯಲಾಗಿದೆ. ಒಂದು ವೇಳೆ ರಾಮಣ್ಣ ಲಮಾಣಿ ಅವರಿಗೆ ಬಿಜೆಪಿ ಟಿಕೆಟ್ ನೀಡಿದರೆ ಬಂಡಾಯ ಅಭ್ಯರ್ಥಿಕಣಕ್ಕಿಳಿಸುವ ಬಗ್ಗೆ ನಾಳೆ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗುತ್ತದೆ. ನಾಳೆ ನಡೆಯುವ ಸಭೆಯಲ್ಲಿ ಮುಖಂಡರು, ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವ ಸಾಧ್ಯತೆ ಇದೆ ಎನ್ನಲಾಗಿದೆ.