ಕಾರವಾರ: ಬಿಜೆಪಿ ಶಾಸಕ ಎಸ್.ಟಿ. ಸೋಮಶೇಖರ್ ಪಕ್ಷದಿಂದ ದೂರವಾಗಿದ್ದು, ಕಾಂಗ್ರೆಸ್ ಗೆ ಹತ್ತಿರವಾಗಿದ್ದಾರೆ. ಅವರ ಜೊತೆಗಾರ ಯಲ್ಲಾಪುರ ಶಾಸಕ ಶಿವರಾಮ್ ಹೆಬ್ಬಾರ್ ಅವರೂ ಕೂಡ ನಾನು ಬಿಜೆಪಿಯಿಂದ ಕಾಲು ಹೊರಗಿಟ್ಟಿದ್ದೇನೆ ಎಂದು ಹೇಳಿದ್ದಾರೆ.
ಮುಂಡಗೋಡದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಶಿವರಾಮ್ ಹೆಬ್ಬಾರ್, ಕೆಲವು ಬಿಜೆಪಿ ಶಾಸಕರು ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ ಎಂದು ಶಾಸಕ ಎಸ್.ಟಿ. ಸೋಮಶೇಖರ್ ಹೇಳಿರುವುದರಲ್ಲಿ ಸತ್ಯಾಂಶವಿದೆ ಎಂದು ತಿಳಿಸಿದ್ದಾರೆ.
ನಾನು ಬಿಜೆಪಿಯಿಂದ ಒಂದು ಕಾಲನ್ನು ಹೊರಗೆ ಇಟ್ಟಿದ್ದೇನೆ ಎಂದಾದರೂ ಬರೆದುಕೊಳ್ಳಿ ಅಥವಾ ಎರಡು ಕಾಲು ಹೊರಗಿಟ್ಟಿದ್ದೇನೆ ಎಂದಾದರೂ ಬರೆದುಕೊಳ್ಳಿ, ರಾಜಕೀಯದಲ್ಲಿ ಯಾವಾಗ ಯಾವ ನಿರ್ಣಯ ತೆಗೆದುಕೊಳ್ಳಬೇಕಿದೆ ಎನ್ನುವುದು ನನಗೆ ಗೊತ್ತಿದೆ ಎಂದು ಅವರು ಹೇಳಿದ್ದಾರೆ.