alex Certify ಇನ್ನಷ್ಟು ಕುತೂಹಲ ಮೂಡಿಸಿದ ಆಪರೇಷನ್ ಹಸ್ತ; ಸಂಸದ ಡಿ.ಕೆ.ಸುರೇಶ್ ಭೇಟಿಯಾದ ಶಾಸಕ ಸುರೇಶ್ ಗೌಡ; ಸಾಲು ಸಾಲು ಬಿಜೆಪಿ-ಜೆಡಿಎಸ್ ನಾಯಕರಿಂದ ಡಿ.ಕೆ.ಸಹೋದರರ ಭೇಟಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಇನ್ನಷ್ಟು ಕುತೂಹಲ ಮೂಡಿಸಿದ ಆಪರೇಷನ್ ಹಸ್ತ; ಸಂಸದ ಡಿ.ಕೆ.ಸುರೇಶ್ ಭೇಟಿಯಾದ ಶಾಸಕ ಸುರೇಶ್ ಗೌಡ; ಸಾಲು ಸಾಲು ಬಿಜೆಪಿ-ಜೆಡಿಎಸ್ ನಾಯಕರಿಂದ ಡಿ.ಕೆ.ಸಹೋದರರ ಭೇಟಿ

ತುಮಕೂರು: ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಆಪರೇಷನ್ ಹಸ್ತಕ್ಕೆ ಕೈ ಹಾಕಿರುವ ಕಾಂಗ್ರೆಸ್, ಬಿಜೆಪಿ ಹಾಗೂ ಜೆಡಿಎಸ್ ಶಾಸಕರನ್ನು ಸೆಳೆಯಲು ಯತ್ನಿಸಿದೆ. ಬಿಜೆಪಿ ಶಾಸಕರಾದ ಎಸ್.ಟಿ.ಸೋಮಶೇಖರ್, ಶಿವರಾಮ್ ಹೆಬ್ಬಾರ್, ಎಂ.ಪಿ.ರೇಣುಕಾಚಾರ್ಯ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಭೇಟಿ ಬೆನ್ನಲ್ಲೇ ಇದೀಗ ಬಿಜೆಪಿ ಹಾಗೂ ಜೆಡಿಎಸ್ ನ ಇನ್ನಷ್ಟು ಶಾಸಕರು ಡಿ.ಕೆ.ಶಿವಕುಮಾರ್ ಅವರನ್ನು ಭೇಟಿಯಾಗಿದ್ದಾರೆ.

ತುಮಕೂರು ಗ್ರಾಮೀಣ ಕ್ಷೇತ್ರದ ಬಿಜೆಪಿ ಶಾಸಕ ಸುರೇಶ್ ಗೌಡ, ಸಂಸದ ಡಿ.ಕೆ.ಸುರೇಶ್ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಅಲ್ಲದೇ ಡಿಸಿಎಂ ಡಿ.ಕೆ.ಶಿವಕುಮಾರ್ ಅವರೊಂದಿಗೂ ಚರ್ಚಿಸಿದ್ದಾರೆ ಎಂದು ತಿಳಿದುಬಂದಿದೆ.

ಎರಡು ದಿನಗಳ ಹಿಂದೆ ಶಾಸಕ ಸುರೇಶ್ ಗೌಡ, ಡಿ.ಕೆ.ಸುರೇಶ್ ಅವರನ್ನು ಭೇಟಿಯಾಗಿ ಸುದೀರ್ಘ ಚರ್ಚೆ ನಡೆಸಿದ್ದಾರೆ. ಬಿಜೆಪಿ ಶಾಸಕರ ಭೇಟಿ ಬೆನ್ನಲ್ಲೇ ಜೆಡಿಎಸ್ ನ ಹಾಲಿ ಹಾಗೂ ಮಾಜಿ ಶಾಸಕರೊಂದಿಗೂ ಚರ್ಚೆ ನಡೆದಿದ್ದು, ಅವರನ್ನೂ ಕಾಂಗ್ರೆಸ್ ಗೆ ಸೆಳೆಯುವ ತಂತ್ರ ಹೆಣೆಯಲಾಗಿದೆ. ಈ ಎಲ್ಲಾ ಬೆಳವಣಿಗೆ ಬೆನ್ನಲ್ಲೇ ಪ್ರಭಾವಿ ಬಿಜೆಪಿ ನಾಯಕರಿಬ್ಬರನ್ನು ಪಕ್ಷಕ್ಕೆ ಸೇರಿಸಿಕೊಂಡು ತುಮಕೂರು ಲೋಕಸಭಾ ಟಿಕೆಟ್ ನೀಡುವ ಬಗ್ಗೆಯೂ ಭಾರಿ ಚರ್ಚೆ ನಡೆದಿದೆ ಎಂದು ತಿಳಿದುಬಂದಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...