ಮಂಗಳೂರು: ಚಾರ್ಮಡಿ ಅರಣ್ಯ ಪ್ರದೇಶದಲ್ಲಿ ಮನೆ ನಿರ್ಮಾಣ ತೆರವು ವೇಳೆ ಜಟಾಪಟಿಗೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಹರೀಶ್ ಪೂಂಜಾ ವಿರುದ್ಧ ಎಫ್ ಐ ಆರ್ ದಾಖಲಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಠಾಣೆಯಲ್ಲಿ ಶಾಸಕ ಹರೀಶ್ ಪೂಂಜಾ ವಿರುದ್ಧ ಅರಣ್ಯಾಧಿಕಾರಿ ಕೆ.ಕೆ.ಜಯಪ್ರಕಾಶ್ ದೂರು ನೀಡಿದ ಹಿನ್ನೆಲೆಯಲ್ಲಿ ಕೇಸ್ ದಾಖಲಾಗಿದೆ.
ಅಕ್ಟೋಬರ್ 9ರಂದು ಶಾಕರು ಹಾಗೂ ಅರಣ್ಯಾಧಿಕಾರಿಗಳ ನಡುವೆ ಜಟಾಪಟಿ ನಡೆದಿತ್ತು. ಈ ವೇಳೆ ಅರಣ್ಯಾಧಿಕಾರಿಗೆ ಶಾಸಕರು ಅವಾಚ್ಯ ಶಬ್ಧಗಳಿಂದ ನಿಂದಿಸಿದ್ದರು ಎಂಬ ಆರೋಪ ಕೇಳಿ ಬಂದಿದೆ. ಈ ಹಿನ್ನೆಲೆಯಲ್ಲಿ ಶಾಸಕರ ವಿರುದ್ಧ ಪ್ರಕರಣ ದಾಖಲಾಗಿದೆ.