ಬೆಂಗಳೂರು: ಮಂಗಳೂರಿನ ಜೆರೋಸಾ ಶಾಲೆಯಲ್ಲಿ ಶಿಕ್ಷಕಿಯಿಂದ ಹಿಂದೂ ಧರ್ಮದ ಬಗ್ಗೆ ಅವಹೇಳನಕಾರಿ ಹೇಳಿಕೆ, ಪ್ರತಿಭಟನೆಗೆ ಸಂಬಂಧಿಸಿದಂತೆ ಬಿಜೆಪಿ ಶಾಸಕರಾದ ಭರತ್ ಶೆಟ್ಟಿ, ವೇದವ್ಯಾಸ ಕಾಮತ್ ವಿರುದ್ಧ ಎಫ್ ಐ ಆರ್ ದಾಖಲಾಗಿದೆ. ಈ ವಿಚಾರ ವಿಧಾನಸಭೆಯಲ್ಲಿ ಪ್ರತಿಧ್ವನಿಸಿದ್ದು, ಸರ್ಕಾರದ ವಿರುದ್ಧ ಬಿಜೆಪಿ ಸದಸ್ಯರು ಕಿಡಿಕಾರಿದ್ದಾರೆ.
ಜೆರೋಸಾ ಶಾಲೆಯ ಶಿಕ್ಷಕಿ 7 ನೇ ತರಗತಿಯಲ್ಲಿ ಪಾಠ ಮಾಡುವ ಬದಲು ಧರ್ಮದ ವಿಚಾರ ಮಾತನಾಡಿದ್ದರೆ. ಹಿಂದೂ ದೇವರ ಬಗ್ಗೆ ಅವಹೇಳನ ಮಾಡಿದ್ದಾರೆ ಈ ಬಗ್ಗೆ ಶಾಸಕ ಭರತ್ ಶೆಟ್ಟಿ ವಿಧಾನಸಭೆಯಲ್ಲಿ ವಿಷಯ ಪ್ರಸ್ತಾಪಿಸಿದರು. ಶಿಕ್ಷಕಿ ಹೇಳಿಕೆ ವಿರುದ್ಧ ವಿದ್ಯಾರ್ಥಿಗಳು ಪೋಷಕರು ಪ್ರತಿಭಟನೆ ನಡೆಸಿದ್ದಾರೆ. ಶಾಲೆಯಲ್ಲಿ ಹಿಂದೂ ಧರ್ಮದ ಬಗ್ಗೆ ಅವಹೇಳನ ಮಾಡಿದನ್ನು ಪ್ರಶ್ನಿಸಿ ಶಿಕ್ಷಕಿಯನ್ನು ಅಮಾನತು ಮಾಡಬೇಕು ಎಂದು ಹಿಂದೂ ಸಂಘಟನೆಗಳು ಪ್ರತಿಭಟನೆ ನಡೆಸಿವೆ. ಪೋಷಕರು ವಿಷಯ ಹೇಳಿದ್ದಕ್ಕೆ ನಾನು ಡಿಡಿಪಿಐಗೆ ವಿಚಾರಣೆ ಮಾಡುವಂತೆ ಹೇಳಿ ಏರ್ ಪೋರ್ಟ್ ಗೆ ಹೋಗಿದ್ದೇನೆ. ಶಾಲೆ ಬಳಿಯು ಹೋಗಿಲ್ಲ. ಸ್ಥಳದಲ್ಲಿ ನಾನು ಇರಲೇ ಇಲ್ಲ ಆದರೂ ನನ್ನ ವಿರುದ್ಧ ಎಫ್ ಐ ಆರ್ ದಾಖಲಿಸಿರುವುದು ಯಾವ ನ್ಯಾಯ? ಎಂದು ಪ್ರಶ್ನಿಸಿದ್ದಾರೆ.
ಈ ವೇಳೆ ವಿಪಕ್ಷ ನಾಯಕ ಆರ್.ಅಶೋಕ್, ಭರತ್ ಶೆಟ್ಟಿ ಸ್ಥಳದಲ್ಲಿ ಇಲ್ಲದಿದ್ದರೂ ಕೇಸ್ ಹಾಕಿದ್ದಾರೆ? ಸರ್ಕಾರಕ್ಕೆ ಕಾಮನ್ ಸೆನ್ಸ್ ಇಲ್ವಾ? ಯಾರ ಚಿತಾವಣೆಯಿಂದ ಈ ರೀತಿ ಕೇಸ್ ಹಾಕಲಾಗುತ್ತಿದೆ? ಮೊದಲು ಇನ್ಸ್ ಪೆಕ್ಟರ್ ಅಮಾನತು ಮಾಡಬೇಕು ಎಂದು ಆಗ್ರಹಿಸಿದರು.
ಶಾಸಕರ ವಿರುದ್ಧ ಎಫ್ ಐ ಆರ್ ದಾಖಲಿಸಿರುವ ಪಾಂಡವೇಶ್ವರ ಠಾಣೆ ಇನ್ಸ್ ಪೆಕ್ಟರ್ ಕಾಲ್ ಡೀಟೆಲ್ ಪರಿಶೀಲನೆ ನಡೆಸಲಿ. ಇನ್ಸ್ ಪೆಕ್ಟರ್ ವಿರುದ್ಧ ಕ್ರಮ ಕೈಗೊಳ್ಳಲಿ ಎಂದು ಒತ್ತಾಯಿಸಿದ್ದಾರೆ.