ಬೆಂಗಳೂರು: ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಕುಟುಂಬಕ್ಕೆ ಬಿಜೆಪಿಯಿಂದ 25 ಲಕ್ಷ ರೂಪಾಯಿ ನೀಡುತ್ತೇವೆ ಎಂದು ಪ್ರವೀಣ್ ನಿವಾಸಕ್ಕೆ ಭೇಟಿ ನೀಡಿದ ವೇಳೆ ಸಚಿವ ಎಸ್. ಅಂಗಾರ ತಿಳಿಸಿದ್ದಾರೆ.
ಪ್ರವೀಣ್ ಪೋಷಕರು ಮತ್ತು ಪತ್ನಿಗೆ ಸಾಂತ್ವಾನ ಹೇಳಿದ ಸಚಿವ ಅಂಗಾರ ಪರಿಹಾರದ ಭರವಸೆ ನೀಡಿದ್ದಾರೆ. ಕೊಲೆ ಆರೋಪಿಗಳನ್ನು 48 ಗಂಟೆಯೊಳಗೆ ಬಂಧಿಸಬೇಕು ಎಂದು ಮೃತರ ಪತ್ನಿ ಒತ್ತಾಯಿಸಿದ್ದಾರೆ.
ಪ್ರವೀಣ್ ಹತ್ಯೆ ಖಂಡಿಸಿ ವಿವಿಧೆಡೆ ಬಿಜೆಪಿ ಮುಖಂಡರು ರಾಜೀನಾಮೆ ನೀಡಿದ್ದಾರೆ. ಬೆಳಗಾವಿಯಲ್ಲಿ ಬಿಜೆಪಿ ಕಾರ್ಯಕರ್ತರ ರಾಜೀನಾಮೆ ಸಲ್ಲಿಕೆಯಾಗಿದೆ. ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ಅರಭಾವಿ ಸಾಮಾಜಿಕ ಜಾಲತಾಣ ವಿಭಾಗದ ಸದಸ್ಯ ಸ್ಥಾನಕ್ಕೆ ಅವಿನಾಶ್ ಹಿರೇಮಠ ರಾಜೀನಾಮೆ ನೀಡಿದ್ದಾರೆ.
ಬೆಂಗಳೂರಿನಲ್ಲಿಯೂ ಬಿಜೆಪಿ ಕಾರ್ಯಕರ್ತರು ರಾಜೀನಾಮೆ ಘೋಷಿಸಿದ್ದಾರೆ. ರಾಜರಾಜೇಶ್ವರಿ ನಗರ ಮಂಡಲ ಸೋಶಿಯಲ್ ಮೀಡಿಯಾ ಸಂಚಾಲಕ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಶ್ರೀನಿವಾಸ ಗೌಡ ಹೇಳಿದ್ದಾರೆ