
ಚಿಕ್ಕಬಳ್ಳಾಪುರ: ಬಿಜೆಪಿ ಸಂಸದ ಬಿ.ಎನ್. ಬಚ್ಚೇಗೌಡ ಬಿಜೆಪಿಯ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಲಿದ್ದಾರೆ.
ಈ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸದಿರಲು ಅವರು ನಿರ್ಧಾರ ಕೈಗೊಂಡಿದ್ದಾರೆ. ಈಗಾಗಲೇ ಬಿಜೆಪಿಯಿಂದ ಬಹುತೇಕ ದೂರವಾಗಿರುವ ಬಚ್ಚೇಗೌಡ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ಭಾನುವಾರ ಅಥವಾ ಸೋಮವಾರ ರಾಜೀನಾಮೆ ಸಲ್ಲಿಸಲಿದ್ದಾರೆ. ಸಾರ್ವಜನಿಕ ಸೇವೆ ಮುಂದುವರೆಸಿಕೊಂಡು ಹೋಗಲಿದ್ದಾರೆ.
ಚಿಕ್ಕಬಳ್ಳಾಪುರ ಲೋಕಸಭೆ ಕ್ಷೇತ್ರಕ್ಕೆ ಇನ್ನು ಬಿಜೆಪಿ ಟಿಕೆಟ್ ಘೋಷಣೆಯಾಗಿಲ್ಲ. ಮಾಜಿ ಸಚಿವ ಡಾ.ಕೆ. ಸುಧಾಕರ್ ಆಕಾಂಕ್ಷಿಯಾಗಿದ್ದಾರೆ.