ಚಿಕ್ಕಬಳ್ಳಾಪುರ : ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಬಿಜೆಪಿ ಸಂಸದ ಬಿ.ಎನ್ ಬಚ್ಚೇಗೌಡ ರಾಜಕೀಯ ನಿವೃತ್ತಿ ಘೋಷಿಸಿದ್ದಾರೆ.
ಈ ಬಗ್ಗೆ ಮಾತನಾಡಿರುವ ಬಿ. ಎನ್ ಬಚ್ಚೇಗೌಡ ‘ಪ್ರಧಾನಿ ನರೇಂದ್ರ ಮೋದಿ ಪ್ರಕಾರ 75 ವರ್ಷಕ್ಕೆ ರಾಜಕೀಯ ನಿವೃತ್ತಿಯಾಗಬೇಕು. ಆದರೆ ನನಗೆ 81 ವರ್ಷ ಆಗಿದೆ. ಆದ್ದರಿಂದ ನಿವೃತ್ತಿ ಪಡೆಯುತ್ತಿದ್ದೇನೆ ಎಂದರು. ಅಲ್ಲದೇ ಮುಂದಿನ ಚುನಾವಣೆಯಲ್ಲಿ ನನಗೆ ಟಿಕೆಟ್ ಇಲ್ಲ ಎಂದು ಹೇಳಿದ್ದಾರೆ. ಒನ್ ಫ್ಯಾಮಿಲಿ ಒನ್ ಟಿಕೆಟ್ ಎಂದು ಘೋಷಣೆ ಮಾಡಿದ್ದಾರೆ. ಬಿಜೆಪಿಯಲ್ಲಿ ಅಪ್ಪ, ಅಜ್ಜ, ಮೊಮ್ಮಗ ಹೀಗೆ ಅವಕಾಶವಿಲ್ಲ. ರಾಜಕಾರಣದಲ್ಲಿ ಸಕ್ರಿಯವಾಗಿರುತ್ತೇನೆ ಎಂದು ಬಿ.ಎನ್ ಬಚ್ಚೇಗೌಡ ಹೇಳಿದ್ದಾರೆ.